ಜೂ. 21ರಂದು ತಾಲೂಕಿನ ಕೆಸ್ತೂರು ಗೇಟ್ ಬಳಿ ಬೈಕ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಒಂದು ಮಗು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿತ್ತು. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮೃತ ಮಗುವಿನ ತಾಯಿಗೆ ಚಿಕಿತ್ಸೆ ಮುಂದುವರಿದಿದೆ.
ಧನ್ವಿತ್ (3) ಸ್ಥಳದಲ್ಲೇ ಮೃತಪಟ್ಟಿತ್ತು. ಆಂಜಿನೇಯ, ಮಮತ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಗಾಯಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.
ಆದರೆ, ಆಂಜಿನೇಯ (30) ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಾವನ್ನಪ್ಪಿರುವ ಕುರಿತು ಮಾಹಿತಿ ತಿಳಿದುಬಂದಿದೆ.
ಜೂ.21ರಂದು ದೇವಸ್ಥಾನಕ್ಕೆಂದು ಅಕ್ಕ, ಅಕ್ಕನ ಮಗ ಹಾಗೂ ತಮ್ಮ ಮೂರು ಮಂದಿ ಬೈಕ್ ನಲ್ಲಿ ತೆರಳುವಾಗ ಘಟನೆ ಸಂಭವಿಸಿತ್ತು.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…