Accident Update: ನೆಲಮಂಗಲದ ಜಿಂದಾಲ್‌ ಸಮೀಪ ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರ ಸಾವು ಕೇಸ್: ಮೃತರಲ್ಲಿ ಮೂವರ ಕಣ್ಣುಗಳ ದಾನ

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ ತುಮಕೂರು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಕಾ ಕಾರು, ಬೆಂಗಳೂರಿನಿಂದ ಹೊರಟಿದ್ದ KSRTC ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ, ಕಾರಿನಲ್ಲಿದ್ದ ಎಲ್ಲಾ ಐವರು ಪ್ರಯಾಣಿಕರು ಸಾವನ್ನಪ್ಪಿದ್ದರು. ವೇಗವಾಗಿ ಬರುತ್ತಿದ್ದ ಕಾರು ಹೆದ್ದಾರಿಯ ಡಿವೈಡರ್‌ ಹಾರಿ ಬಸ್‌ಗೆ ಡಿಕ್ಕಿ ಹೊಡೆದಿದ್ದೇ ಈ ದುರಂತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಮೃತ ದುರ್ದೈವಿಗಳನ್ನು ದೊಡ್ಡಬಳ್ಳಾಪುರದ ಬಸವ ಭವನ ಸಮೀಪದ ರಾಜೀವ್ ಗಾಂಧಿ ಬಡಾವಣೆಯ ನಿವಾಸಿ ಲಲಿತ್, ತಿಪ್ಪಾಪುರದ ಹರ್ಷಿತ್ ಸಿ, ದೇವರಾಜ ನಗರದ ದುರ್ಗಾಪ್ರಸಾದ್, ಕರೇನಹಳ್ಳಿ ಧನುಷ್, ಕಲ್ ಪೇಟೆ ನಿವಾಸಿ ಕೇಶವ್ ಎಂ ಎಂದು ಗುರುತಿಸಲಾಗಿದೆ…

ಮೃತರಲ್ಲಿ ಲಲಿತ್, ಕೇಶವ, ದುರ್ಗಾಪ್ರಸಾದ್ ಮೂವರ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ. ನಗರದ  ಮುಕ್ತಿಧಾಮದಲ್ಲಿ ನಾಲ್ವರ ಅಂತ್ಯಕ್ರಿಯೆ ನಡೆಯಿತು. ಹರ್ಷಿತ್ ಅಂತ್ಯಕ್ರಿಯೆ ತಿಂಡ್ಲು ಗ್ರಾಮದಲ್ಲಿ ನಡೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Ramesh Babu

Journalist

Recent Posts

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

35 minutes ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

6 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

20 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago