ಬೈಕ್ ಹಾಗೂ ಪ್ಯಾಸೆಂಜರ್ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ತಾಲೂಕಿ ಕೋಡಿಹಳ್ಳಿಯ ಕರಿಯಪ್ಪ ದೇವಾಸ್ಥಾನ ಬಳಿ ನಡೆದಿದೆ.
ದೊಡ್ಡಬಳ್ಳಾಪುರದಿಂದ ಕೋಡಿಹಳ್ಳಿಗೆ ಹೋಗುತ್ತಿದ್ದ ಪ್ಯಾಸೆಂಜರ್ ಆಟೋಗೆ ಕೋಡಿಹಳ್ಳಿಯಿಂದ ದೊಡ್ಡಬಳ್ಳಾಪುರ ಟೌನ್ ಕಡೆ ಅತಿವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿ ರಭಸಕ್ಕೆ ಬೈಕ್ ಸವಾರ ಮನಮೋಹನ್ ಎಂಬ ವ್ಯಕ್ತಿಗೆ ತಲೆಗೆ ತೀವ್ರವಾಗಿ ಪೆಟ್ಟಾಗಿತ್ತು. ಕೂಡಲೇ ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಮೃತಪಟ್ಟ ಬೈಕ್ ಸವಾರ ಮನಮೋಹನ್ ಬೆಂಗಳೂರು ಮೂಲದವನಾಗಿದ್ದು, ಕೋಡಿಹಳ್ಳಿಯ ಅಜ್ಜಿ ಮನೆಯಲ್ಲಿ ಕೆಲದಿನಗಳಿಂದ ವಾಸವಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…