Accident update: ಹೆದ್ದಾರಿಯಲ್ಲಿ ಕಾರು ಪಲ್ಟಿ: ಪೂಜೆಗೆ ಹೊರಟಿದ್ದವರು ಮಸಣ ಸೇರಿದರು: ನಾಲ್ಕು‌ ಮಂದಿ ಸಾವು: ಇನ್ನುಳಿದ ನಾಲ್ಕು‌ ಮಂದಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಕಾರಿನಲ್ಲಿ ಪೂಜೆಗೆಂದು ದೊಡ್ಡಬಳ್ಳಾಪುರ ತಾಲೂಕಿನ ಕರೇನಹಳ್ಳಿ ನಿವಾಸಿಗಳಾದ ಕಾರಿನಲ್ಲಿ ಏಂಟು ಮಂದಿ ಸ್ನೇಹಿತರು ಹೊರಡುವಾಗ ಬೆಂಗಳೂರು-ಹಿಂದೂಪುರ ಹೆದ್ದಾರಿಯ ನಾಯಕರಂಡನಹಳ್ಳಿ-ಮಾಕಳಿ ಮಾರ್ಗ ಮಧ್ಯೆಯಲ್ಲಿ ಭೀಕರ ಅಪಘಾತ ನಡೆದಿದೆ.

ಮಂಚೇನಹಳ್ಳಿ ಬಳಿಯ ಭೀಮೇಶ್ವರ ಬೆಟ್ಟದಲ್ಲಿ ಪೂಜೆಗೆಂದು ಸುಮಾರು ಏಂಟು ಮಂದಿ ಸ್ನೇಹಿತರು ಕಾರಿನಲ್ಲಿ ಹೊರಟಿದ್ದರು. ನಾಲ್ಕು‌ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನುಳಿದ ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿವೆ.

ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಕಾಲೇಜು ಸಮೀಪದ  ಕರೇನಹಳ್ಳಿ ನಿವಾಸಿಗಳಾದ  ಡಿ.ಎಂ ಈಶ್ವರಪ್ಪ(75), ಡಿ.ಎನ್ ಕಾಳಪ್ಪ(65), ನರಸಿಂಹಮೂರ್ತಿ(70), ಪುರುಷತ್ತೋಮ(75), ಹಾಗೂ ಗೋಪಿನಾಥ್ ಮೃತ ದುರ್ದೈವಿಗಳು.

ಲಾರಿಯನ್ನು ಸೈಡ್ ಹೊಡೆಯಲು ಹೋದಾಗ ಎದರುಗಡೆಯಿಂದ ಕೆಎಸ್ ಆರ್ ಟಿಸಿ ಬಸ್ ಅಡ್ಡಬಂದಿದೆ. ಈ ವೇಳೆ ಕಾರು‌ ನಿಯಂತ್ರಣ ಕಳೆದುಕೊಂಡು ಪಲ್ಟಿ ಹೊಡೆದಿದೆ ಎನ್ನಲಾಗಿದೆ .

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…

Ramesh Babu

Journalist

Recent Posts

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

2 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

4 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

4 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

11 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

22 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 day ago