Categories: Accident

Accident Update: ಹೊಸಕೋಟೆ ಸರಣಿ ಅಪಘಾತ ಪ್ರಕರಣ ಮಾಸುವ ಮುನ್ನವೇ, ನೆಲಮಂಗಲದ ಜಿಂದಾಲ್‌ ಸಮೀಪ ಮತ್ತೊಂದು ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರ ಸಾವು: ಮೃತರ ವಿವರ ಇಲ್ಲಿದೆ ನೋಡಿ…

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 12 ಗಂಟೆಯ ಸುಮಾರಿಗೆ ತುಮಕೂರು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಕಾ ಕಾರು, ಬೆಂಗಳೂರಿನಿಂದ ಹೊರಟಿದ್ದ KSRTC ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ, ಕಾರಿನಲ್ಲಿದ್ದ ಎಲ್ಲಾ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೇಗವಾಗಿ ಬರುತ್ತಿದ್ದ ಕಾರು ಹೆದ್ದಾರಿಯ ಡಿವೈಡರ್‌ ಹಾರಿ ಬಸ್‌ಗೆ ಡಿಕ್ಕಿ ಹೊಡೆದಿದ್ದೇ ಈ ದುರಂತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಮೃತ ದುರ್ದೈವಿಗಳನ್ನು ದೊಡ್ಡಬಳ್ಳಾಪುರದ ಬಸವ ಭವನ ಸಮೀಪದ ನಿವಾಸಿ ಲಲಿತ್, ತಿಪ್ಪಾಪುರದ ಹರ್ಷಿತ್ ಸಿ, ದೇವರಾಜ ನಗರದ ದುರ್ಗಾಪ್ರಸಾದ್, ಕರೇನಹಳ್ಳಿ ಧನುಷ್, ಕಲ್ ಪೇಟೆ ನಿವಾಸಿ ಕೇಶವ್ ಎಂ ಎಂದು ಗುರುತಿಸಲಾಗಿದೆ…

ಮೃತ ಹರ್ಷಿತ್​​ ರಾಜನಕುಂಟೆ ಸಾಯಿ ವಿದ್ಯಾ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ದ್ವಿತೀಯ ವರ್ಷದ ಡಿಗ್ರಿ ಓದುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತನೂ ಪ್ರಾಣ ಬಿಟ್ಟಿದ್ದಾನೆ.

ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹ ರವಾನೆ ಮಾಡಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Ramesh Babu

Journalist

Recent Posts

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

4 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

9 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

24 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago