ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಆಹಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಕೆ.ಎಸ್.ಆರ್.ಟಿ.ಸಿ ಮತ್ತು ಬಿ.ಎಂ.ಟಿ.ಸಿ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ, ಬಸ್ ಗಳಿಗೆ ಹಸಿರು ನಿಶಾನೆ ತೋರಿದರು.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಎಲ್ಲಾ ಸೌಲಭ್ಯಗಳನ್ನು ಹೊಂದಿದ್ದು ಇದು ಎಲ್ಲಾ ವಿಮಾನ ನಿಲ್ದಾಣ ಗಳಿಗಿಂತ ವಿಭಿನ್ನವಾಗಿದೆ ಮತ್ತು ಅತಿ ದೊಡ್ದ ವಿಮಾನ ನಿಲ್ದಾಣವಾಗಿದೆ.
ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಸಂಚಾರ ಮಾಡಲು BMTC ಮತ್ತು ವಾಯುವಜ್ರದ ಎಲೆಕ್ಟ್ರಿಕ್ ಬಸ್ ಗಳ ಸೇವೆಯನ್ನು ಕಲ್ಪಿಸಿದ್ದು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಸ್ ಗಳನ್ನು ನೀಡಲು ಸಚಿವರು ಒಪ್ಪಿಗೆ ಯನ್ನು ನೀಡಿದರು.
ದೇವನಹಳ್ಳಿ ತಾಲ್ಲೂಕಿನ ತೂಬಗೆರೆ ಪಂಚಾಯತಿಗೆ ಬಸ್ ಗಳು ಅನಾನುಕೂಲ ಇರುವುದರಿಂದ ಅಲ್ಲಿಗೆ ಸಂಪರ್ಕ ಕಲ್ಪಿಸಲು ಸಾರಿಗೆ ಸಚಿವರಿಗೆ ಮನವಿಯನ್ನು ನೀಡಲಾಯಿತು.
ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್ಎಸ್ ಘಾಟಿ ಸುಬ್ರಮಣ್ಯ ದೇವಸ್ಥಾನ ಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಭಕ್ತಾದಿಗಳು ಬರುವುದರಿಂದ ಬಸ್ ವ್ಯವಸ್ಥೆಗಳು ಹಾಗೂ ಅನ್ನ ದಾಸೋಹ ಭವನವನ್ನು ನಿರ್ಮಾಣ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಿಗೆ ಮನವಿಯನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ವ್ಯವಸ್ಥಾಪಕ ನಿರ್ದೇಶಕರಾದ ಸತ್ಯವತಿ, ಮುಖ್ಯ ಕಾರ್ಯನಿರ್ವಾಹಕ ಸತ್ಯಕಿರಘುನಾಥ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ್.ಎನ್ ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿ, ಹಾಗೂ ಸಾರಿಗೆ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…