BMTC ಮತ್ತು ವಾಯುವಜ್ರ ಎಲೆಕ್ಟ್ರಿಕ್ ಬಸ್ ಗಳಿಗೆ ಚಾಲನೆ

ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಆಹಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ  ಕೆ.ಹೆಚ್.ಮುನಿಯಪ್ಪ ಅವರು ಕೆ.ಎಸ್.ಆರ್.ಟಿ.ಸಿ ಮತ್ತು ಬಿ.ಎಂ.ಟಿ.ಸಿ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ, ಬಸ್ ಗಳಿಗೆ ಹಸಿರು ನಿಶಾನೆ ತೋರಿದರು.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಎಲ್ಲಾ ಸೌಲಭ್ಯಗಳನ್ನು ಹೊಂದಿದ್ದು ಇದು ಎಲ್ಲಾ ವಿಮಾನ ನಿಲ್ದಾಣ ಗಳಿಗಿಂತ ವಿಭಿನ್ನವಾಗಿದೆ ಮತ್ತು ಅತಿ ದೊಡ್ದ ವಿಮಾನ ನಿಲ್ದಾಣವಾಗಿದೆ.

ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಸಂಚಾರ ಮಾಡಲು BMTC ಮತ್ತು  ವಾಯುವಜ್ರದ ಎಲೆಕ್ಟ್ರಿಕ್ ಬಸ್ ಗಳ ಸೇವೆಯನ್ನು ಕಲ್ಪಿಸಿದ್ದು   ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಸ್ ಗಳನ್ನು ನೀಡಲು ಸಚಿವರು ಒಪ್ಪಿಗೆ ಯನ್ನು ನೀಡಿದರು.

ದೇವನಹಳ್ಳಿ ತಾಲ್ಲೂಕಿನ  ತೂಬಗೆರೆ ಪಂಚಾಯತಿಗೆ ಬಸ್ ಗಳು ಅನಾನುಕೂಲ ಇರುವುದರಿಂದ ಅಲ್ಲಿಗೆ ಸಂಪರ್ಕ ಕಲ್ಪಿಸಲು ಸಾರಿಗೆ ಸಚಿವರಿಗೆ ಮನವಿಯನ್ನು ನೀಡಲಾಯಿತು.

ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್ಎಸ್ ಘಾಟಿ ಸುಬ್ರಮಣ್ಯ ದೇವಸ್ಥಾನ ಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಭಕ್ತಾದಿಗಳು ಬರುವುದರಿಂದ ಬಸ್ ವ್ಯವಸ್ಥೆಗಳು ಹಾಗೂ ಅನ್ನ ದಾಸೋಹ ಭವನವನ್ನು ನಿರ್ಮಾಣ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಿಗೆ ಮನವಿಯನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ವ್ಯವಸ್ಥಾಪಕ ನಿರ್ದೇಶಕರಾದ ಸತ್ಯವತಿ, ಮುಖ್ಯ ಕಾರ್ಯನಿರ್ವಾಹಕ  ಸತ್ಯಕಿರಘುನಾಥ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ್.ಎನ್ ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿ, ಹಾಗೂ ಸಾರಿಗೆ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

16 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

1 day ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 days ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago