CJI ಬಿ.ಆರ್ ಗವಾಯಿ ಮೇಲೆ ಶೂ ಎಸೆತ ವಿಚಾರ: ಇದು CJI ಮೇಲೆ ನಡೆದ ದಾಳಿಯಲ್ಲ: ಇದು ಭಾರತದ ಸಂವಿಧಾನದ ಮೇಲೆ ನಡೆದ ದಾಳಿ- ಶೂ ಎಸೆದ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು- ಕದಸಂಸ ಜಿಲ್ಲಾ ಸಂಚಾಲಕ ರಾಮಾಮೂರ್ತಿ (ರಾಮು) ನೇರಳೆಘಟ್ಟ ಆಗ್ರಹ

ಸುಪ್ರೀಂಕೋರ್ಟ್ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ವಕೀಲನೊಬ್ಬ ಭಾರತದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಶೂ ಎಸೆತ ಪ್ರಯತ್ನದ ಪ್ರಕರಣವನ್ನು ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಎಂದು ಬೆಂಗಳೂರು ಜಿಲ್ಲಾ ಸಂಚಾಲಕ ರಾಮಾಮೂರ್ತಿ (ರಾಮು) ನೇರಳೆಘಟ್ಟ ತಿಳಿಸಿದರು.

ಶೂ ಎಸೆದ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಯನ್ನು ನಡೆಸಿ, ಈ ದಾಳಿಯ ಹಿಂದಿನ ಹುನ್ನಾರವನ್ನು ಕೇಂದ್ರ ಸರ್ಕಾರ ಬಯಲಿಗೆಳೆಯ ಬೇಕೆಂದು ಒತ್ತಾಯಿಸಿದ್ದಾರೆ.

ಪ್ರಕರಣ ಕುರಿತು ಮಾತನಾಡಿದ ಅವರು, ಇದು ಮುಖ್ಯನ್ಯಾಯಮೂರ್ತಿಯವರ ಮೇಲೆ ನಡೆದ ದಾಳಿಯಲ್ಲ. ಇದು ಭಾರತದ ಸಂವಿಧಾನದ ಮೇಲೆ ನಡೆದ ದಾಳಿಯಾಗಿದೆ. ದೇಶದಲ್ಲಿ ಸಂವಿಧಾನ ಜಾರಿಯಾದಾಗಲೇ ನಮ್ಮ ದೇಶದ ಸಂವಿಧಾನವನ್ನು ಈ ಸನಾತನವಾದಿಗಳು ವಿರೋಧಿಸಿದ್ದರು. ದಲಿತನೊಬ್ಬ ಮುಖ್ಯ ನ್ಯಾಯಮೂರ್ತಿಯ ಪೀಠದಲ್ಲಿ ಕುಳಿತು ನ್ಯಾಯ ಕೊಡುವುದನ್ನು ಈ ಸನಾತನವಾದಿಗಳು ಯಾವೊತ್ತು ಒಪ್ಪಿಕೊಳ್ಳುವುದಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದಿದ್ದಾರೆ.

ಶೂ ಎಸೆದ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಮತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಯನ್ನು ನಡೆಸಿ, ಈ ದಾಳಿಯ ಹಿಂದಿನ ಸನಾತನವಾದಿಗಳ ಹುನ್ನಾರವನ್ನು ಕೇಂದ್ರ ಸರ್ಕಾರ ಬಯಲಿಗೆಳೆಯಬೇಕೆಂದು ಒತ್ತಾಯಿಸಿದ್ದಾರೆ.

ನಂತರ ರಾಜ್ಯಾ ಸಂಚಾಲಕರಾದ ಎಂ.ಗುರುಮೂರ್ತಿ ಶಿವಮೊಗ್ಗ ಮಾತನಾಡಿ, ಸುಪ್ರೀಂಕೋರ್ಟ್‌ನಲ್ಲಿಯೇ ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಅವರ ಮೇಲೆ ದಾಳಿ ನಡೆದಿದೆ ಎಂದರೆ  ಸಮಾಜ ಯಾವ ದಿಕ್ಕಿನಲ್ಲಿ ಹೋಗುತ್ತಾ ಇದೆ ಯೋಚನೆ ಮಾಡಬೇಕಾದ ಸಂದರ್ಭ ಬಂದಿದೆ ಪ್ರತಿಯೊಬ್ಬ ಭಾರತೀಯರು ಅವರ ಜೊತೆ ನಿಲ್ಲಬೇಕು ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಕಳಕಳಿಯ ನ್ಯಾಯಮೂರ್ತಿಗಳಾಗಿ ದೇಶಾದ್ಯಂತ ಗುರುತಿಸಿಕೊಂಡಿದ್ದಾರೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ನಂಬಿಕೆಗೆ ವಕೀಲ ದ್ರೋಹ ಬಗೆದಿದ್ದಾನೆ ಎಂದು ಆರೋಪಿಸಿದರು.

ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು  ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಬೇಧವಿಲ್ಲದವರು ದೇಶದಲ್ಲಿ ಎಲ್ಲಾ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ  ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕು ಶೋಷಿತ ಸಮುದಾಯದವರಾದ ಬಿ.ಆರ್. ಗವಾಯಿ ಅವರು ತಮ್ಮ ಶ್ರಮದಿಂದ ದೇಶದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಹೊರಹೊಮ್ಮಿದ್ದಾರೆ. ಅವರ ಮೇಲಿನ ಹಿಂಸಾತ್ಮಕ ಘಟನೆ ನ್ಯಾಯಾಂಗ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!