Categories: ಕೊಡಗು

Crime Update: ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಮೀನಾ ಹತ್ಯೆ ಪ್ರಕರಣ: ಬಾಲಕಿಯನ್ನು ಕೊಂದ ಆರೋಪಿ ಮೊಣ್ಣಂಡ ಪ್ರಕಾಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಆರೋಪಿ ಮೃತ ದೇಹ ಪತ್ತೆಯಾದರು ಮೀನಾಳ ರುಂಡ ಪತ್ತೆಯಾಗಿಲ್ಲ: ನಿಗೂಢವಾಗಿ ಉಳಿದ ಮೀನಾಳ ಹತ್ಯೆ ಪ್ರಕರಣ

ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಪ್ರಕಾಶ್ ನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಲದಲ್ಲಿರುವ ತನ್ನ ಮನೆಯ ಸಮೀಪದಲ್ಲೆ ನೇಣಿಗೆ ಶರಣಾಗಿದ್ದಾನೆ.

ಆದರೆ, ಪ್ರಕಾಶ್ ತೆಗೆದುಕೊಂಡು ಹೋಗಿದ್ದ ಬಾಲಕಿಯ ರುಂಡ ಮಾತ್ರ ಪತ್ತೆಯಾಗಿಲ್ಲ. ಸದ್ಯ ಬಾಲಕಿಯ ರುಂಡ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಕೊಲೆಯ ಹಿಂದಿನ ಮರ್ಮವನ್ನು ಈತನೊಂದಿಗೆ ಜೀಪಿನಲ್ಲಿ ತೆರಳಿದ ಎನ್ನಲಾದ ಸಹಚಾರನಿಂದ ಮಾತ್ರ ತಿಳಿಯಬಹುದಾಗಿದೆ. ಆತನನ್ನು ಬಂದಿಸಿದಾಗ ಮಾತ್ರ  ಕೊಲೆಗೆ ಕಾರಣ ತಿಳಿಯಬಹುದಾಗಿದೆ.

ನಿನ್ನೆ ಕೊಡಗಿನ ಸೂರ್ಲಬ್ಬಿಯಲ್ಲಿ ನಡೆದ ವಿದ್ಯಾರ್ಥಿನಿ ಮೀನಾ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಣ್ಣಂಡ ಪ್ರಕಾಶ್ ಎಂದು ಹೇಳಲಾಗಿತ್ತು.

ನಿನ್ನೆ 32 ವರ್ಷ ಪ್ರಾಯದ ಮೊಣ್ಣಂಡ ಪ್ರಕಾಶ ಹಾಗೂ ಮೀನಾ ಅವರ ನಡುವೆ ಮದುವೆಯ ನಿಶ್ಚಿತಾರ್ಥ ಕಾರ್ಯ ನಡೆಯುವ ಸಂಬಂಧವಾಗಿ ಎಲ್ಲರೂ ಸೇರ್ಪಡಿಗೊಂಡಿದ್ದರು.

ಈ ಬಗ್ಗೆ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಹಾಯ ವಾಣಿಗೆ ದೂರು ಬಂದ ಅನ್ವಯ ಸಮಾಜ ಕಲ್ಯಾಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಲಹೆ ಹಾಗೂ ಅರಿವು ಮೂಡಿಸಿ ಆಕೆಗೆ 18 ತುಂಬಿದ ನಂತರ ಮದುವೆ ಮಾಡಿಸುವಂತೆ ಸೂಚನೆ ನೀಡಿದರು.

ಈ ಸೂಚನೆಗೆ ಉಭಯ ಕಡೆಗಳು ಒಪ್ಪಿಕೊಂಡಿದ್ದರು. ಆದರೆ, ಸಂಜೆ 5.30 ರ ಸಮಯದಲ್ಲಿ ಪ್ರಕಾಶ್ ಆಕೆ ಮನೆಗೆ ತೆರಳಿ ಏಕಾಏಕಿ ತಂದೆ ಹಾಗೂ ತಾಯಿಗೆ ಹೊಡೆದು ಗಾಯಗೊಳಿಸಿ ಮೀನಳನ್ನು ಧರಧರನೇ 100 ಮೀಟರ್ ಎಳೆದೊಯ್ದು, ಆಕೆಯ ತಲೆಯನ್ನು ಕಡಿದು ತಲೆಯ ಭಾಗ ಸಹಿತ ತೆಗೆದುಕೊಂಡು ಪರಾರಿಯಾಗಿದ್ದನು ಎನ್ನಲಾಗಿತ್ತು.

ಆರೋಪಿ ಪ್ರಕಾಶ್ ನನ್ನು ಹೆಡೆಮುರಿ ಕಟ್ಟಲು ಪೊಲೀಸರು ಮುಂದಾಗಿದ್ದರು. ಆದರೆ ಪ್ರಕಾಶ್ ನೇಣಿಗೆ ಶರಣಾಗಿದ್ದಾನೆ. ಆರೋಪಿ ಪ್ರಕಾಶ್ ಜತೆಗೆ ಮತ್ತೋವ೯ನಿದ್ದ – ಆತ ಮತ್ತು ಪ್ರಕಾಶ್ ಬಳಸಿದ್ದ ವಾಹನದ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

4 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

6 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

9 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

10 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

21 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

21 hours ago