ರಾಜ್ಯದಲ್ಲಿ eKYC ಪ್ರಕ್ರಿಯೆ ಪೂರ್ಣಗೊಳಿಸದ ಪಡಿತರ ಚೀಟಿದಾರರ ಸಂಖ್ಯೆ ಇನ್ನೂ ಗಮನಾರ್ಹವಾಗಿದೆ. ಈ ವಿಚಾರದಲ್ಲಿ ಗಂಭೀರ ಚಿಂತೆ ವ್ಯಕ್ತಪಡಿಸಿ, ಈ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸಂಬಂಧಿತ ಅಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆ ನೀಡಿಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಆಹಾರ, ನಾಗರಿಕ ಸರಬರಾಜು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಮೈಸೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದೆ ಮಾತನಾಡಿದ ಅವರು, ಒಂದು ತಿಂಗಳ ಗಡಿಯನ್ನು ನಿಗದಿ ಮಾಡಿದ್ದು, ಈ ಅವಧಿಯಲ್ಲಿ eKYC ಮುಗಿಸದ ಫಲಾನುಭವಿಗಳ ಪಡಿತರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚಿಸಲಾಗಿದೆ ಎಂದರು.
ಯಾವುದೇ ಅನಗತ್ಯ ಪಡಿತರ ಕಾರ್ಡ್ ವಿತರಣೆಯಾದರೆ, ತಕ್ಷಣವೇ ತನಿಖೆ ನಡೆಸಿ ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾವಾರಿಯಾಗಿ ಜಾಗೃತಿ ಸಮಿತಿಗಳನ್ನು ರಚಿಸಿ, ಸಾರ್ವಜನಿಕರಲ್ಲಿ ತಿಳಿವು ಮೂಡಿಸುವ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಹೇಳಿದರು.
ಇದೇ ಸಭೆಯಲ್ಲಿ ಆಹಾರಧಾನ್ಯಗಳ ಸುರಕ್ಷಿತ ಸಂಗ್ರಹಣೆ, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸಿದ ಧಾನ್ಯಗಳ ನಿರ್ವಹಣೆ, ಗುಡ್ಡ ಪ್ರದೇಶದ ಮನೆಗಳಿಗೆ ಪಡಿತರ ತಲುಪುವ ವ್ಯವಸ್ಥೆ, ಕಾನೂನು ಮಾಪನ ಇಲಾಖೆಗೆ ಬೇಕಾದ ವಾಹನ-ಸಿಬ್ಬಂದಿ ಸೇರಿದಂತೆ ಹಲವಾರು ವಿಷಯಗಳ ಕುರಿತು ಸೂಕ್ತ ಸೂಚನೆಗಳು ನೀಡಲಾಯಿತು ಎಂದು ತಿಳಿಸಿದರು.
ಪಡಿತರ ವ್ಯವಸ್ಥೆಯಲ್ಲಿನ ಪಾರದರ್ಶಕತೆ, ಪ್ರಾಮಾಣಿಕತೆ ಮತ್ತು ಸಾರ್ವಜನಿಕ ಹಿತವನ್ನು ಕೇಂದ್ರಬಿಂದುಗೊಳಿಸಿಕೊಂಡು ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಈ ಸಭೆಯಲ್ಲಿ ಇಲಾಖೆ ಕಾರ್ಯದರ್ಶಿ ಶ್ರೀ ಮನೋಜ್ ಜೈನ್, ಆಯುಕ್ತ ಶ್ರೀಮತಿ ವಿಜಯ ಜ್ಯೋತ್ಸ್ನಾ, ಆಪ್ತ ಕಾರ್ಯದರ್ಶಿ ಡಾ. ಎಚ್. ನಟರಾಜ್, ನಿಗಮ ನಿರ್ದೇಶಕ ಶ್ರೀ ಜಗದೀಶ್ ಹಾಗೂ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…