ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಬಳಿಯ Foxconn iPhone ತಯಾರಿಕಾ ಕಂಪನಿಯಲ್ಲಿ ಕನ್ನಡಿಗರ ಮೇಲೆ ವಲಸಿಗರು(ಹಿಂದಿ ಭಾಷಿಕರು) ಹಲ್ಲೆ ಮಾಡಿದ್ದಾರೆ ಎನ್ನಲಾದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಹಿಂದಿ ವೆಂಡರ್ ಮತ್ತು ಕನ್ನಡದ ಚಾಲಕರ ಗುಂಪಿನ ನಡುವೆ ಗಲಾಟೆ ನಡೆದಿದೆ. ಕಾರನ್ನು ಫ್ಯಾಕ್ಟರಿ ಒಳಗಡೆ ತೆಗೆದುಕೊಂಡು ಹೋದ ವಿಚಾರಕ್ಕೆ ಜಗಳ ನಡೆದಿದೆ ಎನ್ನಲಾಗಿದೆ.
ಈ ವೇಳೆ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕನ್ನಡ ಕಾರ್ಮಿಕರ ಮೇಲೆ ಅನ್ಯ ಭಾಷಿಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಕೂಗಾಟ, ನೂಕಾಟ, ತಳ್ಳಾಟ, ಮಾತಿನ ಚಕಮಕಿ ನಡೆದಿದ್ದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ಏರ್ಪಟ್ಟಿತ್ತು ಎನ್ನಲಾಗಿದೆ. ನಂತರ ಆಡಳಿತ ಮಂಡಳಿ ಮಧ್ಯಸ್ಥಿಕೆ ವಹಿಸಿ ಪರಿಸ್ಥಿತಿ ತಿಳಿಗೊಳಿಸಿದೆ.
ಕೆಲವರು ಗಲಾಟೆ ನಡೆದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಕನ್ನಡಿಗರಿಗೆ ಮೇಲೆ ದಬ್ಬಾಳಿಕೆ ಖಂಡಿಸಿ ತಮ್ಮ ಆಕ್ರೋಶವ್ಯಕ್ತಪಡಿಸುತ್ತಿದ್ದಾರೆ.
ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.