H3N2ಗೆ ಕರ್ನಾಟಕದಲ್ಲಿ ಮೊದಲ ಬಲಿ: ಕರ್ನಾಟಕ-ಹರಿಯಾಣದಲ್ಲಿ ತಲಾ 1 ಸಾವು

ದೇಶದಲ್ಲಿ ಕೋವಿಡ್ 19 ಸಾಂಕ್ರಾಮಿಕದ ಬಳಿಕ ಈಗ ಎಚ್‌3ಎನ್‌2 ಅಥವಾ ಇನ್‌ಫ್ಲೂಯೆಂಜಾ ವೈರಸ್ ಭೀತಿ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ‌ ಮಾಡಿದೆ. ಎಚ್‌3ಎನ್2 ವೈರಸ್‌ಗೆ ದೇಶದಲ್ಲಿ ಮೊದಲ ಎರಡು ಸಾವುಗಳು ವರದಿಯಾಗಿವೆ. ಕರ್ನಾಟಕದಲ್ಲಿ ಒಬ್ಬರು ಮತ್ತು ಹರಿಯಾಣದಲ್ಲಿ ಒಬ್ಬರು ವೈರಸ್‌ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ.

ದೇಶದಲ್ಲಿ ಸುಮಾರು 90 ಎಚ್‌3ಎನ್‌2 ಪ್ರಕರಣಗಳು ಈವರೆಗೂ ದಾಖಲಾಗಿವೆ. ಇದಲ್ಲದೆ ಎಚ್‌1ಎನ್1 (ಹಂದಿ ಜ್ವರ) ವೈರಸ್‌ನ ಎಂಟು ಪ್ರಕರಣಗಳು ಕೂಡ ವರದಿಯಾಗಿವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಹಾಂಕಾಂಗ್ ಫ್ಲೂ ಎಂದೂ ಕರೆಯಲಾಗುವ ವೈರಸ್‌ಗೆ ರಾಜ್ಯದ ಹಾಸನದಲ್ಲಿ ಒಬ್ಬರು ಬಲಿಯಾಗಿದ್ದಾರೆ. ಮತ್ತೊಂದು ಸಾವು ಹರಿಯಾಣದಲ್ಲಿ ದಾಖಲಾಗಿದೆ.

ಜ್ವರ, ನಿರಂತರ ಕೆಮ್ಮು, ಉಸಿರಾಟದ ಸಮಸ್ಯೆ ಹಾಗೂ ಉಬ್ಬಸ ಇದರ ಸಾಮಾನ್ಯ ಲಕ್ಷಣಗಳಿಂದ ಈ ರೋಗ‌ ಬರುತ್ತದೆ. ಇದರ ಜತೆಗೆ ವಾಕರಿಕೆ, ಗಂಟಲು ನೋವು, ಮೈಕೈ ನೋವು ಮತ್ತು ಅತಿಸಾರದ ಸಮಸ್ಯೆಗಳನ್ನೂ ರೋಗಿಗಳು ಅನುಭವಿಸುತ್ತಿದ್ದಾರೆ. ಈ ಲಕ್ಷಣಗಳು ಒಂದು ವಾರದವರೆಗೂ ನಿರಂತರವಾಗಿ ಕಾಡುವ ಅಪಾಯವಿದೆ.

ಈ ವೈರಸ್ ಹೆಚ್ಚು ಅಪಾಯಕಾರಿಯಾಗಿದ್ದು, ಕೆಮ್ಮು, ಸೀನು ಹಾಗೂ ಸೋಂಕಿತ ಜನರೊಂದಿಗಿನ ಸಂಪರ್ಕದಿಂದ ಹರಡುತ್ತದೆ. ಇದರಿಂದ ರಕ್ಷಣೆ ಪಡೆಯಲು ಕೋವಿಡ್ ಮಾದರಿಯ ಕ್ರಮಗಳನ್ನೇ ಅನುಸರಿಸಬೇಕು ಎಂದು ವೈದ್ಯರು ಸಲಹೆ ನೀಡುತ್ತಿದ್ದಾರೆ.

ಜನರು ನಿರಂತರವಾಗಿ ಕೈಗಳನ್ನು ತೊಳೆದುಕೊಳ್ಳುತ್ತಿರಬೇಕು ಮತ್ತು ಮಾಸ್ಕ್‌ ಧರಿಸಬೇಕು. ಸೀನುವಾಗ ಮತ್ತು ಕೆಮ್ಮುವಾಗ ಜನರು ಮುಖ ಹಾಗೂ ಮೂಗನ್ನು ಮುಚ್ಚಿಕೊಳ್ಳಬೇಕು. ಯಥೇಚ್ಛವಾಗಿ ನೀರು ಕುಡಿಯಬೇಕು. ಕಣ್ಣು ಮತ್ತು ಮೂಗನ್ನು ಮುಟ್ಟದಂತೆ ಎಚ್ಚರ ವಹಿಸಬೇಕು. ಜ್ವರ ಹಾಗೂ ದೇಹದ ನೋವಿಗೆ ಪ್ಯಾರಾಸಿಟಮಾಲ್ ತೆಗೆದುಕೊಳ್ಳಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಸಲಹೆ ನೀಡಿದೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

10 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

12 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

14 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

14 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

16 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

21 hours ago