ದೇಶದಲ್ಲಿ H3N2 ವೈರಸ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗಿನ ಸಭೆ ನಡೆಸಲಾಯಿತು.
ರಾಜ್ಯದಲ್ಲಿ H3N2 ವೈರಸ್ ಸೋಂಕು ಹರಡುವಿಕೆ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ.
ಇಂದಿನಿಂದ ಆಸ್ಪತ್ರೆಗಳ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, H3N2 ಸೋಂಕು ಹರಡುವಿಕೆಯ ಬಗ್ಗೆ ನಿಗಾ ವಹಿಸಲಾಗಿದೆ.
ಮಕ್ಕಳು, ಹಿರಿಯ ನಾಗರಿಕರು ಹಾಗೂ ಗರ್ಭಿಣಿಯರು H3N2 ವೈರಸ್ ಸೋಂಕಿನಿಂದ ರಕ್ಷಿಸಿಕೊಳ್ಳಲು ಜನಸಂದಣಿಯಿಂದ ದೂರವಿರಬೇಕು ಹಾಗೂ ನೈರ್ಮಲ್ಯ ಕಾಪಾಡಿಕೊಳ್ಳಬೇಕಾಗಿದೆ ಎಂದು ಮನವಿ ಮಾಡಿರುವ ಸಚಿವ ಡಾ.ಕೆ.ಸುಧಾಕರ್