ಮಹಿಳಾ ವಿಶ್ವ ಬಾಕ್ಸಿಂಗ್; ಚಿನ್ನ ಗೆದ್ದ ನೀತು ಘಂಘಾಸ್ ಮತ್ತು ಸವೀಟಿ ಬೂರಾ

ಬಾಕ್ಸಿಂಗ್ ಫೆಡರೇಶನ್ ಆಫ್ ಇಂಡಿಯಾ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ತಮ್ಮ ಅಮೋಘ ಪ್ರದರ್ಶನದೊಂದಿಗೆ ಚಿನ್ನದ ಪದಕಗಳನ್ನು ಗೆದ್ದ ಭಾರತೀಯ ಬಾಕ್ಸರ್‌ಗಳಾದ ನೀತು ಘಂಘಾಸ್ ಮತ್ತು ಸವೀಟಿ ಬೂರಾ. ಈ ಸಾಧನೆಯಿಂದ ಭಾರತದ ನೂತನ ವಿಶ್ವ ಚಾಂಪಿಯನ್‌ ಆಗಿ ಮೂಡಿಬಂದಿದ್ದಾರೆ.

48 ಕೆಜಿ ವಿಭಾಗದ ಫೈನಲ್‌ನಲ್ಲಿ ನೀತು ಘಂಘಾಸ್‌ ಅವರು ಮಂಗೋಲಿಯಾದ ಲುಸೈಖಾನ್‌ ಅಲ್ತಾನ್ಸೆತ್ಸೆಗ್‌ ವಿರುದ್ಧ 5-0 ಅಂತರದಿಂದ ಜಯ ಸಾಧಿಸಿದರು.

22 ವರ್ಷದ ನೀತು ಘಂಘಾಸ್‌ ಅವರು ಕಿಕ್ಕಿರಿದು ಜಮಾಯಿಸಿದ್ದ ವೀಕ್ಷಕರ ಸಮ್ಮುಖದಲ್ಲಿ ಅಮೋಘ ಪ್ರದರ್ಶನ ನೀಡಿದರು.

ಮತ್ತೊಂದು ಪಂದ್ಯದಲ್ಲಿ ಸವೀಟಿ ಬೂರಾ (81 ಕೆಜಿ) ಅವರು ಚೀನದ ವಾಂಗ್‌ ಲಿನಾ ಅವರನ್ನು 3-2ರಿಂದ ಪರಾಭವಗೊಳಿಸಿದರು.

ಇವರಿಬ್ಬರ ಸಾಧನೆಯೊಂದಿಗೆ ಭಾರತದ ವನಿತಾ ವಿಶ್ವ ಚಾಂಪಿಯನ್‌ಗಳ ಸಂಖ್ಯೆ ಏಳಕ್ಕೇರಿತು. ಮೇರಿ ಕೋಮ್‌ (6 ಸಲ), ಸರಿತಾ ದೇವಿ, ಜೆನ್ನಿ ಆರ್‌.ಎಲ್‌., ಲೇಖಾ ಕೆ.ಸಿ., ನಿಖತ್‌ ಜರೀನ್‌ ಉಳಿದ ಸಾಧಕಿಯರು.

Ramesh Babu

Journalist

Recent Posts

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

1 hour ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

5 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

21 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

22 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago