#ICCChampionsTrophy: ಪಾಕಿಸ್ತಾನ ವಿರುದ್ಧ ವಿಜಯ ಕೇಕೆ ಹಾಕಿದ ಟೀಂ ಇಂಡಿಯಾ: ಸೆಂಚುರಿ ಬಾರಿಸಿದ  ವಿರಾಟ್ ಕೊಹ್ಲಿ

ಆಕರ್ಷಕ ಕವರ್ ಡ್ರೈವ್ ಮೂಲಕ ಬೊಂಬಾಟ್ ಶತಕ ಸಿಡಿಸುವ ಮೂಲಕ ಕೋಹ್ಲಿ ಪಾಕಿಸ್ತಾನಕ್ಕೆ ವಿರಾಟ್ ರೂಪದ ದರ್ಶನ ಮಾಡಿಸುವ ಮೂಲಕ ಗೆದ್ದು 2017 ರ ಚಾಂಪಿಯನ್ಸ್ ಟ್ರೋಫಿ ಫೈನಲ್ಸ್ ಪಂದ್ಯದ ಸೋಲಿನ ಮುಯ್ಯಿ ತೀರಿಸಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮಹಮದ್ ರಿಜ್ವಾನ್ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಆರಂಭ ಉತ್ತಮವಾಗಿರಲಿಲ್ಲ ಅಕ್ಷರ್ ಪಟೇಲ್ ಹೊಡೆದ ರನೌಟ್ ಗೆ ಆರಂಭಿಕ ಆಟಗಾರ ಇಮಾಮ್ ಉಲ್ ಹಕ್ ಪೆವಿಲಿಯನ್ ಸೇರಿದರು.

ನಂತರ ಬಂದ ಆಟಗಾರರನ್ನು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಇನ್ನಿಲ್ಲದಂತೆ ಕಾಡಿ ಬಾಬರ್ ಅಜಾಮ್ (23) ಹಾಗೂ ಶಕೀಲ್(62) ಅವರ ಜೊತೆಯಾಟ ಮುರಿಯುವಲ್ಲಿ ಸಫಲರಾದರು.

ವಿಕೆಟ್ ಪತನವಾದರೂ ನಾಯಕ ರಿಜ್ವಾನ್ (46) ಹಾಗೂ ಕುಶ್ದಿಲ್ (38)ರನ್ ಗಳಿಸಿದರೂ ಉತ್ತಮ ಮೊತ್ತ ಕಲೆಹಾಕುವಲ್ಲಿ ವಿಫಲರಾದರು, ಭಾರತದ ಪರವಾಗಿ ಕುಲದೀಪ್ ಯಾದವ್ ಮೂರು ವಿಕೆಟ್, ಹಾರ್ದಿಕ್ ಪಾಂಡ್ಯ ಎರಡು ವಿಕೆಟ್ ಪಡೆದರು.

ಸಾಧಾರಣ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (20) ಹಾಗೂ ಶುಭಮನ್ ಗಿಲ್ (46) ವೇಗವಾಗಿ ರನ್ ಪೇರಿಸಿ ಅಡಿಪಾಯ ಹಾಕಿದರು.

ಚೇಸಿಂಗ್ ಕಿಂಗ್ ಎಂದೇ ಹೆಸರಾದ ವಿರಾಟ್ ಕೊಹ್ಲಿ ಏಳು ಬೌಂಡರಿ ನೆರವಿನಿಂದ (100) ರನ್ ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (56)ಅವರ ಆಕಶ೯ಕ ಅಧ೯ ಶತಕದ ನೆರವಿನಿಂದ ಟೀಂ ಇಂಡಿಯಾ ಗೆದ್ದು ಬೀಗಿತು.

ಹಾಲಿ ಚಾಂಪಿಯನ್ ಪಾಕಿಸ್ತಾನ ಟೂರ್ನಿಯಿಂದ ಹೊರಗೆ ಹೋಗುವ ಸಾಧ್ಯತೆಯೇ ಹೆಚ್ಚಿದ್ದು ಮುಂದಿನ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಗೆದ್ದು ಮಾನ ಉಳಿಸಿಕೊಳ್ಳ ಬೇಕಿದೆ, ಟೂರ್ನಿಯಲ್ಲಿ ಆಕಶ೯ಕ ಶತಕ ದಾಖಲಿಸಿದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

56 minutes ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

5 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

5 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

10 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

22 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

22 hours ago