iPhone ತಯಾರಿಸೋ ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಜಮೀನು ಶೀಘ್ರ ಹಸ್ತಾಂತರ: ಶಾಸಕ ಧೀರಜ್‌ಮುನಿರಾಜ್ ಅವರ ಪ್ರಶ್ನೆಗೆ ಸಕಾರಾತ್ಮಕ ಉತ್ತರ ನೀಡಿದ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್

 

ಫಾಕ್ಸ್‌ಕಾನ್ ಕಂಪನಿಗೆ 300 ಎಕರೆ ಜಮೀನನ್ನು ಯಾವಾಗ ಹಸ್ತಾಂತರ ಮಾಡಲಾಗುತ್ತದೆ ಎಂದು ಶಾಸಕ ಧೀರಜ್‌ಮುನಿರಾಜ್ ಅವರು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರಿಗೆ ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನೆ ಮಾಡಿದಾಗ ಸಕಾರಾತ್ಮಕ ಉತ್ತರ ನೀಡಿದ ಸಚಿವ ಎಂ.ಬಿ.ಪಾಟೀಲ್, ಕರ್ನಾಟಕಕ್ಕೆ ಐಫೋನ್ ಘಟಕ ಬರುವುದು ಖಚಿತವಾಗಿದೆ. ಐಫೋನ್ ತಯಾರಿಸುವ ಬಹುರಾಷ್ಟ್ರೀಯ ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ ಕೊಡುವುದಾಗಿ ಸರಕಾರ ಘೋಷಿಸಿದೆ. ಜಮೀನು ಹಸ್ತಾಂತರಿಸುವ ಸಂಬಂಧ ಇದ್ದ ಕಾನೂನು ತೊಡಕುಗಳನ್ನು ನಿವಾರಿಸಲಾಗಿದೆ. ಶೀಘ್ರವೇ ಕಂಪನಿಗೆ ಜಾಗ ಹಸ್ತಾಂತರಿಸಲಾಗುವುದು ಎಂದರು.

ಕಂಪನಿಗೆ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ಹೋಬಳಿಗೆ ಸೇರಿದ ಮಾಹಿತಿ ತಂತ್ರಜ್ಞಾನ ಹೂಡಿಕೆ ವಲಯ (ಐ ಟಿ ಐ ಆರ್) ದಲ್ಲಿ 300 ಎಕರೆ ಜಾಗ ಕೊಡಲಾಗುತ್ತದೆ. ಕಂಪನಿ ಸುಮಾರು 8,500 ಕೋಟಿ ರೂ. ಹೂಡಿ, ತಯಾರಿಕಾ ಘಟಕ ಸ್ಥಾಪಿಸಲಿದೆ. ಭೂಮಿ ಹಸ್ತಾಂತರವಾಗುತ್ತಿದ್ದಂತೆ ಕಂಪನಿಯು ನಿರ್ಮಾಣ ಕಾಮಗಾರಿ ಶುರು ಮಾಡಬಹುದು. ನಿರೀಕ್ಷೆ ಪ್ರಕಾರ ಮುಂದಿನ ವರ್ಷ ಉತ್ಪಾದನೆ ಕೂಡ ಆರಂಭಿಸಲಿದೆ. 50 ಸಾವಿರ ಜನರಿಗೆ ಉದ್ಯೋಗ ದೊರಕಿಸುವ ಈ ಯೋಜನೆಯ ಬಗ್ಗೆ ಸರ್ಕಾರ ಮುತುವರ್ಜಿ ವಹಿಸಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ 3 ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಸ್ಥಾಪನೆಯಾಗಿವೆ. ಇವು ಸುಮಾರು 110 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದು, 1,450ಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಿವೆ.

ಈ ಸಂಬಂಧ ದೊಡ್ಡಬಳ್ಳಾಪುರದ ಶಾಸಕ ಧೀರಜ್ ಮುನಿರಾಜು ಅವರು ಪ್ರಶ್ನೆಯನ್ನು ಕೇಳಿದ್ದರು. ಇದಕ್ಕೆ ವಿಧಾನಸಭೆಯಲ್ಲಿ ಉತ್ತರ ನೀಡಿದ ಎಂ ಬಿ ಪಾಟೀಲ್ ಅವರು ಈ ಘೋಷಣೆ ಮಾಡಿದ್ದಾರೆ. ಅಲ್ಲದೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲೂ ಕೂಡ ಇದನ್ನು ಹಂಚಿಕೊಂಡಿದ್ದಾರೆ.

ರಾಜ್ಯದಲ್ಲಿ ಐಫೋನ್ ಘಟಕ ಸ್ಥಾಪನೆಯಾಗುವುದರೊಂದಿಗೆ ಬೆಂಗಳೂರು ಸರಹದ್ದಿನಲ್ಲಿರುವ ಎರಡನೇ ಸ್ತರದ ನಗರಗಳು ಅಭಿವೃದ್ಧಿ ಹೊಂದಲು ಕಾರಣವಾಗಲಿದೆ. ದೊಡ್ಡಬಳ್ಳಾಪುರ ಸುತ್ತಮುತ್ತಲಿನ ಯುವಕರಿಗೆ ಆಶಾದಾಯಕವಾಗಲಿದೆ.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

4 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

9 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

9 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

17 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago