ಫಾಕ್ಸ್‌ಕಾನ್ ಕಂಪನಿಗೆ 300 ಎಕರೆ ಜಮೀನನ್ನು ಯಾವಾಗ ಹಸ್ತಾಂತರ ಮಾಡಲಾಗುತ್ತದೆ ಎಂದು ಶಾಸಕ ಧೀರಜ್‌ಮುನಿರಾಜ್ ಅವರು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರಿಗೆ ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನೆ ಮಾಡಿದಾಗ ಸಕಾರಾತ್ಮಕ ಉತ್ತರ ನೀಡಿದ ಸಚಿವ ಎಂ.ಬಿ.ಪಾಟೀಲ್, ಕರ್ನಾಟಕಕ್ಕೆ ಐಫೋನ್ ಘಟಕ ಬರುವುದು ಖಚಿತವಾಗಿದೆ. ಐಫೋನ್ ತಯಾರಿಸುವ ಬಹುರಾಷ್ಟ್ರೀಯ ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ ಕೊಡುವುದಾಗಿ ಸರಕಾರ ಘೋಷಿಸಿದೆ. ಜಮೀನು ಹಸ್ತಾಂತರಿಸುವ ಸಂಬಂಧ ಇದ್ದ ಕಾನೂನು ತೊಡಕುಗಳನ್ನು ನಿವಾರಿಸಲಾಗಿದೆ. ಶೀಘ್ರವೇ ಕಂಪನಿಗೆ ಜಾಗ ಹಸ್ತಾಂತರಿಸಲಾಗುವುದು ಎಂದರು.
ಕಂಪನಿಗೆ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ಹೋಬಳಿಗೆ ಸೇರಿದ ಮಾಹಿತಿ ತಂತ್ರಜ್ಞಾನ ಹೂಡಿಕೆ ವಲಯ (ಐ ಟಿ ಐ ಆರ್) ದಲ್ಲಿ 300 ಎಕರೆ ಜಾಗ ಕೊಡಲಾಗುತ್ತದೆ. ಕಂಪನಿ ಸುಮಾರು 8,500 ಕೋಟಿ ರೂ. ಹೂಡಿ, ತಯಾರಿಕಾ ಘಟಕ ಸ್ಥಾಪಿಸಲಿದೆ. ಭೂಮಿ ಹಸ್ತಾಂತರವಾಗುತ್ತಿದ್ದಂತೆ ಕಂಪನಿಯು ನಿರ್ಮಾಣ ಕಾಮಗಾರಿ ಶುರು ಮಾಡಬಹುದು. ನಿರೀಕ್ಷೆ ಪ್ರಕಾರ ಮುಂದಿನ ವರ್ಷ ಉತ್ಪಾದನೆ ಕೂಡ ಆರಂಭಿಸಲಿದೆ. 50 ಸಾವಿರ ಜನರಿಗೆ ಉದ್ಯೋಗ ದೊರಕಿಸುವ ಈ ಯೋಜನೆಯ ಬಗ್ಗೆ ಸರ್ಕಾರ ಮುತುವರ್ಜಿ ವಹಿಸಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ 3 ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಸ್ಥಾಪನೆಯಾಗಿವೆ. ಇವು ಸುಮಾರು 110 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದು, 1,450ಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಿವೆ.
ಈ ಸಂಬಂಧ ದೊಡ್ಡಬಳ್ಳಾಪುರದ ಶಾಸಕ ಧೀರಜ್ ಮುನಿರಾಜು ಅವರು ಪ್ರಶ್ನೆಯನ್ನು ಕೇಳಿದ್ದರು. ಇದಕ್ಕೆ ವಿಧಾನಸಭೆಯಲ್ಲಿ ಉತ್ತರ ನೀಡಿದ ಎಂ ಬಿ ಪಾಟೀಲ್ ಅವರು ಈ ಘೋಷಣೆ ಮಾಡಿದ್ದಾರೆ. ಅಲ್ಲದೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲೂ ಕೂಡ ಇದನ್ನು ಹಂಚಿಕೊಂಡಿದ್ದಾರೆ.
ರಾಜ್ಯದಲ್ಲಿ ಐಫೋನ್ ಘಟಕ ಸ್ಥಾಪನೆಯಾಗುವುದರೊಂದಿಗೆ ಬೆಂಗಳೂರು ಸರಹದ್ದಿನಲ್ಲಿರುವ ಎರಡನೇ ಸ್ತರದ ನಗರಗಳು ಅಭಿವೃದ್ಧಿ ಹೊಂದಲು ಕಾರಣವಾಗಲಿದೆ. ದೊಡ್ಡಬಳ್ಳಾಪುರ ಸುತ್ತಮುತ್ತಲಿನ ಯುವಕರಿಗೆ ಆಶಾದಾಯಕವಾಗಲಿದೆ.
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…