ಸುಮಾರು 60 ದಿನಗಳ ಕಾಲ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣ ಬಡಿಸಿದ್ದ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಇಂದು ತೆರೆ ಬೀಳಲಿದೆ.
18ನೇ ಆವೃತ್ತಿಯ ಐಪಿಎಲ್ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕಾದಾಟ ನಡೆಸಲಿವೆ.
ಉಭಯ ತಂಡಗಳು ಸತತ 17 ವರ್ಷ ಕಠಿಣ ತಪ್ಪಸ್ಸನ್ನೇ ಮಾಡಿದ್ದು, ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿವೆ. ಇಬ್ಬರಲ್ಲಿ ಒಬ್ಬರ 17 ವರ್ಷಗಳ ವನವಾಸಕ್ಕೆ ಇಂದು ತೆರೆ ಬೀಳಲಿದೆ.
ಟ್ರೋಫಿಯ ಮೇಲೆ ಯಾವ ತಂಡದ ಹೆಸರು ಮುದ್ರಣವಾಗಲಿದೆ ಎಂಬುದು ಸದ್ಯ ಕುತೂಹಲ ಮೂಡಿಸಿದೆ.
ಇದೆಲ್ಲದರ ನಡುವೆ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಆರ್ ಸಿ ಬಿ ಫ್ಯಾನ್ಸ್ ವಿನೂತನವಾಗಿ ಆರ್ ಸಿ ಬಿ ಟೀಮ್ ಗೆ ಸಪೋರ್ಟ್ ಮಾಡಿ ಎಂದು ಡಂಗೂರ ಸಾರುವ ಮೂಲಕ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.
ಗ್ರಾಮದ ಪ್ರಮುಖ ಬೀದಿ ಬೀದಿಗಳಲ್ಲಿ ತಮಟೆ ಹೊಡೆದು ಆರ್ ಸಿ ಬಿ ಟೀಮ್ ಗೆ ಸಪೋರ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.
ಸಂಜೆ ನಡೆಯಲಿರುವ ಪಂದ್ಯ ವೀಕ್ಷಣೆಗೆ ಗ್ರಾಮದಲ್ಲಿ ಎಲ್ಇಡಿ ಸ್ಕ್ರೀನ್ ವ್ಯವಸ್ಥೆ ಕೂಡ ಮಾಡಲಾಗಿದೆ.
ಸದ್ಯ ಫೈನಲ್ ಪಂದ್ಯ ವೀಕ್ಷಣೆ ಮಾಡಲು ಗ್ರಾಮದ ಜನರು ಕಾತುರದಿಂದ ಕಾಯುತ್ತಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…
ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…
ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…
ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…