ಹೈದರಾಬಾದ್ : ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನ ತೋರಿದ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಹೈದರಾಬಾದ್ ಸನ್ ರೈಸರ್ಸ್ ವಿರುದ್ಧ ಗೆದ್ದು ಹ್ಯಾಟ್ರಿಕ್ ಜಯದ ಮಾಲೆಯನ್ನು ಧರಿಸಿತು.
ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಆರಂಭ ಉತ್ತಮವಾಗಿತ್ತು, ನಾಯಕ ರೋಹಿತ್ ಶರ್ಮಾ (28) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (38) ರನ್ ಗಳಿಸಿ ಭದ್ರ ಬುನಾದಿ ಹಾಕಿದರು.
ನಂತರ ಬಂದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಆರು ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ ಅಜೇಯ (64) ರನ್ ಗಳಿಸಿದರೆ ತಿಲಕ್ ವರ್ಮಾ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ (37) ರನ್ ಗಳಿಸಿ ತಂಡದ ಮೊತ್ತವನ್ನು 190 ರ ಗಡಿ ದಾಟಿಸಿದರು.
ಈ ಸಂದರ್ಭದಲ್ಲಿ ಜೊತೆಯಾದ ಕನ್ನಡಿಗ ಮಯಾಂಕ್ ಅಗರ್ವಾಲ್ (48) ಹಾಗೂ ನಾಯಕ ಮಾಕ್ರಮ್ (22) ತಂಡಕ್ಕೆ ಆಸರೆಯಾದರು, ಹೆನ್ರೀಚ್ ಕ್ಲಾಸೆನ್ (36) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.
ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಪಿಯೂಶ್ ಚಾವ್ಲಾ, ಮೆರಡಿತ್ ಹಾಗೂ ಬೆಹರ್ಡನ್ ತಲಾ ಎರಡು ವಿಕೆಟ್ ಪಡೆದರು, ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ನಲ್ಲಿ ಮಿಂಚಿದ್ದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…