Categories: ಐಪಿಎಲ್

IPL2023: ಮುಂಬೈಗೆ ಹ್ಯಾಟ್ರಿಕ್ ಗೆಲುವಿನ ಮಾಲೆ

ಹೈದರಾಬಾದ್ : ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನ ತೋರಿದ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಹೈದರಾಬಾದ್ ಸನ್ ರೈಸರ್ಸ್ ವಿರುದ್ಧ ಗೆದ್ದು ಹ್ಯಾಟ್ರಿಕ್ ಜಯದ ಮಾಲೆಯನ್ನು ಧರಿಸಿತು.

ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಆರಂಭ ಉತ್ತಮವಾಗಿತ್ತು, ನಾಯಕ ರೋಹಿತ್ ಶರ್ಮಾ (28) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (38) ರನ್ ಗಳಿಸಿ ಭದ್ರ ಬುನಾದಿ ಹಾಕಿದರು.

ನಂತರ ಬಂದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಆರು ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ ಅಜೇಯ (64) ರನ್ ಗಳಿಸಿದರೆ ತಿಲಕ್ ವರ್ಮಾ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ (37) ರನ್ ಗಳಿಸಿ ತಂಡದ ಮೊತ್ತವನ್ನು 190 ರ ಗಡಿ ದಾಟಿಸಿದರು.

ಸ್ಪರ್ಧಾತ್ಮಕ ಮೊತ್ತ ಬೆನ್ನಟ್ಟಿದ ಹೈದರಾಬಾದ್ ಸನ್ ರೈಸರ್ಸ್ ತಂಡದ ಆರಂಭ ಉತ್ತಮವಾಗಿರಲಿಲ್ಲ, ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಹ್ಯಾರಿ ಬ್ರೂಕ್ (9) ಬೇಗನೆ ವಿಕೆಟ್ ಒಪ್ಪಿಸಿದರು, ನಂತರ ಬಂದ ತ್ರಿಪಾಠಿ (7) ಹೆಚ್ಚು ಹೊತ್ತು ನಿಲ್ಲಲಿಲ್ಲ ಇಬ್ಬರೂ ಸಹ ಬೆಹರ್ಡನ್ ಗೆ ವಿಕೆಟ್ ಒಪ್ಪಿಸಿದರು.

ಈ ಸಂದರ್ಭದಲ್ಲಿ ಜೊತೆಯಾದ ಕನ್ನಡಿಗ ಮಯಾಂಕ್ ಅಗರ್ವಾಲ್ (48) ಹಾಗೂ ನಾಯಕ ಮಾಕ್ರಮ್ (22) ತಂಡಕ್ಕೆ ಆಸರೆಯಾದರು, ಹೆನ್ರೀಚ್ ಕ್ಲಾಸೆನ್ (36) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಪಿಯೂಶ್ ಚಾವ್ಲಾ, ಮೆರಡಿತ್ ಹಾಗೂ ಬೆಹರ್ಡನ್ ತಲಾ ಎರಡು ವಿಕೆಟ್ ಪಡೆದರು, ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ನಲ್ಲಿ ಮಿಂಚಿದ್ದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

4 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

9 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

24 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago