KIALನಲ್ಲಿ ಅ.19, 20ರಂದು ವಿಪತ್ತು ನಿರ್ವಹಣೆ ಕುರಿತು ಅಣುಕು ಪ್ರದರ್ಶನ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅ.19 ಹಾಗೂ 20 ರಂದು ನಡೆಯುವ ಜಿಲ್ಲಾಮಟ್ಟದ ಟೇಬಲ್ ಟಾಪ್ ಎಕ್ಸೈಸ್ ಮತ್ತು ಅಣುಕು ಪ್ರದರ್ಶನ ಕಾರ್ಯಕ್ರಮಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ವಿಪತ್ತು ನಿರ್ವಹಣೆ ಕುರಿತು ಆಯಾ ಇಲಾಖೆಯ ಜವಬ್ದಾರಿಯನ್ನು ತಿಳಿದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ “ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ table top exercise ಮತ್ತು ಅಣುಕು ಪ್ರದರ್ಶನದ” ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಡಿಯಲ್ಲಿ ಬರುವ ಎಲ್ಲಾ ಇಲಾಖೆಗಳ ಮುಖ್ಯಸ್ಥರುಗಳು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಶೋಕ ಅಲ್ಫಾ-3 ಸಭಾಂಗಣದಲ್ಲಿ ನಡೆಯಲಿರುವ  ಸಭೆಗೆ ಹಾಜರಿದ್ದು ತಮ್ಮ ತಮ್ಮ ಇಲಾಖೆಗಳ ಪಾತ್ರ ಹಾಗೂ ಜವಾಬ್ದಾರಿಗಳು, ಸಹಕಾರ ಸಹಯೋಗದೊಂದಿಗೆ ಕಾರ್ಯನಿರ್ವಹಿಸುವ ಕುರಿತು ಅರಿತುಕೊಳ್ಳಬೇಕು.

ಅಲ್ಲದೆ ಟೇಬಲ್ ಟಾಪ್ ಸಂಬಂಧಿಸಿದಂತೆ ಅಗ್ನಿಶಾಮಕದಳ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಗಳು ಇಲಾಖೆಗಳ ಪಾತ್ರ ಮತ್ತು ಜವಾಬ್ದಾರಿ, ಸಂಪನ್ಮೂಲ ವ್ಯವಸ್ಥೆ, ಜನ ಜಾನುವಾರುಗಳ ಸಂರಕ್ಷಣೆ ಕುರಿತು ಪಿ.ಪಿ.ಟಿ ಮೂಲಕ ಸಭೆಗೆ ಪ್ರಸ್ತುತ ಪಡಿಸುವಂತೆ ಸೂಚಿಸಿ ಅಕ್ಟೋಬರ್ 20ರಂದು ನಡೆಯಲಿರುವ ಅಣುಕು ಪ್ರದರ್ಶನದ ದಿನದಂದು ಜಿಲ್ಲೆಯ ಎಲ್ಲಾ ಇಲಾಖೆ ಮುಖ್ಯಸ್ಥರು ತಮ್ಮ ತಮ್ಮ ಇಲಾಖೆ ಮುಖ್ಯಸ್ಥರಿಗೆ ವಹಿಸಿರುವ ಜವಾಬ್ದಾರಿಗಳನ್ನು ಚಾಚು ತಪ್ಪದೆ ನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೂಚಿಸಿದರು.

ಸಭೆಯಲ್ಲಿ ವಿಪತ್ತು ನಿರ್ವಹಣಾ ಪರಿಣಿತರಾದ ಬಸವರಾಜು ವಿ, ವಿಪತ್ತು ಸ್ಪಂದನ ವ್ಯವಸ್ಥೆ ತರಬೇತುದಾರ ಮತ್ತು ಬೋಧಕರಾದ ರಘು ಬಿ ವಿ, ಅಗ್ನಿಶಾಮಕ ದಳ, ಪೋಲಿಸ್ ಇಲಾಖೆ ಸಿಬ್ಬಂದಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

3 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

19 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

19 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

1 day ago