ಕರ್ನಾಟಕ ಲೋಕಸೇವಾ ಆಯೋಗವು(KPSC) 2023-24ನೇ ಸಾಲಿಗೆ 384 ‘ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್’ (ಕೆಎಎಸ್) ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಿದೆ.
ಕೆಪಿಎಸ್ ಸಿ ಉಸ್ತುವಾರಿ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು ಇಂದು ಅಧಿಸೂಚನೆ ಹೊರಡಿಸಿದ್ದಾರೆ.
ಅರ್ಜಿ ಸಲ್ಲಿಸುವ ವಿಧಾನ
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮಾರ್ಚ್ 4ರಿಂದ ಪ್ರಾರಂಭವಾಗಲಿದ್ದು, ಏಪ್ರಿಲ್ 3ಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಶುಲ್ಕ
ಅರ್ಜಿ ಶುಲ್ಕ ಸಾಮಾನ್ಯ ವರ್ಗಕ್ಕೆ ₹600, ಪ್ರವರ್ಗ 2ಎ, 2ಬಿ, 3ಎ, 3ಬಿಗೆ ₹300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹50 ಮತ್ತು ಎಸ್‌ಸಿ, ಎಸ್‌ಟಿ, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ಮೇ.5 ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ.
ಹುದ್ದೆ
ಕಲ್ಯಾಣ ಕರ್ನಾಟಕ ಗ್ರೂಪ್ (ಹೈ-ಕ) ಹುದ್ದೆಗಳು ಸೇರಿದಂತೆ ಒಟ್ಟು 384 ಹುದ್ದೆಗಳಲ್ಲಿ 159 ‘ಗ್ರೂಪ್-ಎ’ ಹುದ್ದೆಗಳು ಮತ್ತು 225 ‘ಗ್ರೂಪ್-ಬಿ’ ಹುದ್ದೆಗಳಿವೆ.
ವಿದ್ಯಾರ್ಹತೆ
ಕಲ್ಯಾಣ ಕರ್ನಾಟಕ ವೃಂದದ ಒಟ್ಟು 77 ಹುದ್ದೆಗಳಿವೆ. ಪದವಿ, ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ
ಕನಿಷ್ಠ 21 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಲು ಅರ್ಹರು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 38 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿಗೆ 41 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 43 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಪರೀಕ್ಷೆ ವಿಧಾನ
ಈ ನೇಮಕಾತಿಯನ್ನು ಪೂರ್ವಭಾವಿ ಪರೀಕ್ಷೆ (ಬಹು ಆಯ್ಕೆಯ ಮಾದರಿಯ ಪ್ರಶ್ನೆಗಳು), ಮುಖ್ಯ ಪರೀಕ್ಷೆ (ವಿವರಣಾತ್ಮಕ) ಮತ್ತು ವ್ಯಕ್ತಿತ್ವ ಪರೀಕ್ಷೆ ಎಂಬ ಮೂರು ಹಂತಗಳಲ್ಲಿ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಗಾಗಿ kpsc.kar.nic.in ಗೆ ಭೇಟಿ ನೀಡಬಹುದಾಗಿದೆ.