ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ ಅತ್ತಿವಾಟ ಗೇಟ್ ಬಳಿ ನಡೆದಿದೆ.
ಕೋಲಾರದಿಂದ ಧರ್ಮಸ್ಥಳ ಮಾರ್ಗವಾಗಿ ಸಂಚರಿಸುತ್ತಿದ್ದ KSRTC ಬಸ್‌ಗೆ, ಯೂ-ಟರ್ನ್ ಪಡೆಯುತ್ತಿದ್ದ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬಸ್‌ನ ಮುಂಭಾಗ ಜಖಂಗೊಂಡಿದೆ.
ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹೊಸಕೋಟೆ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಬಳಿಕ ಪೊಲೀಸರು ಸಂಚಾರವನ್ನು ಸುಗಮಗೊಳಿಸಿದರು.
ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…