LKG, UKG ತರಗತಿಗಳಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು (ವಿಜಯಪುರ) ದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಯಲ್ಲಿ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳಿಂದ “ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ “ವೆಬ್ ಸೈಟ್” https://erp.dom.karnataka.gov.in/lkg ಮೂಲಕ ಆನ್ ಲೈನ್ ನಲ್ಲಿ ಪೋಷಕರು ಅರ್ಜಿಗಳನ್ನು ಸಲ್ಲಿಸಬುದಾಗಿದೆ. ಮೇ 8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ (ಮುಸ್ಲಿಂ. ವಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್) ವಿದ್ಯಾರ್ಥಿಗಳಿಗೆ ಶೇ.75% ಹಾಗೂ ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇ.25% ರಷ್ಟು ಸೀಟುಗಳು ಖಾಲಿ ಇದ್ದು, ವಿದ್ಯಾರ್ಥಿಗಳಿಗೆ ಎಲ್ಲಾ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು.

ಹೆಚ್ಚಿನ ವಿವರಗಳಿಗಾಗಿ ನಿರ್ದೇಶನಾಲಯದ ಅಧಿಕೃತ ವೆಬ್ ಸೈಟ್ :https://dom.karnataka.gov.in, ಜಿಲ್ಲಾ ಅಧಿಕಾರಿಗಳ ಕಚೇರಿ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.216, 2ನೇ ಮಹಡಿ, ಜಿಲ್ಲಾಧಿಕಾರಿಗಳ ಹೊಸ ಸಂಕೀರ್ಣ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂರವಾಣಿ ಸಂಖ್ಯೆ- 080-29787455, ಮುಖ್ಯೋಪಾಧ್ಯಾಯರು, ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆ, ವಿಜಯಪುರ, ದೇವನಹಳ್ಳಿ ತಾಲ್ಲೂಕು, ದೂರವಾಣಿ ಸಂಖ್ಯೆ- 9066296080, ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಮತ್ತು ತಾಲ್ಲೂಕು ಮಾಹಿತಿ ಕೇಂದ್ರಗಳು, ವಿಜಯಪುರ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕು. ದೂರವಾಣಿ ಸಂಖ್ಯೆ-080-27682882, 27627444, 27931899, 27725445, 8317403213, ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ : 8277799990 ಗೆ ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

Ramesh Babu

Journalist

Recent Posts

ಬೀದಿ ನಾಯಿಗಳ ದಾಳಿಗೆ 10ಕ್ಕೂ ಹೆಚ್ಚು ಕುರಿ, ಮೇಕೆ ಬಲಿ!: ದೂರು ನೀಡಿದರೂ ಕ್ರಮ ಕೈಗೊಳ್ಳದ ಪಂಚಾಯಿತಿ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…

6 hours ago

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

11 hours ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

1 day ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

2 days ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

2 days ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago