Categories: ಸಿನಿಮಾ

‘Most Prolific Film Star in Indian Cinema’: ಮೆಗಾಸ್ಟಾರ್ ಚಿರಂಜೀವಿ ಡಾನ್ಸ್ ಗೆ ಒಲಿದ ಗಿನ್ನೀಸ್ ವಿಶ್ವ ದಾಖಲೆ ಗೌರವ

ತನ್ನ ಚಲನ ಚಿತ್ರಗಳಲ್ಲಿ ವಿವಿಧ ಹಾಡುಗಳಿಗೆ ವಿಭಿನ್ನವಾದ ಸ್ಟೆಪ್ಸ್ ಹಾಕುವ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ತೆಲುಗಿನ ಹಿರಿಯ ನಟ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಭಾರತೀಯ ಚಲನಚಿತ್ರೋದ್ಯಮದ ಅತ್ಯಂತ ಕ್ರಿಯಾತ್ಮಾಕ ತಾರೆ ಎಂದು ಗಿನ್ನಿಸ್ ವಿಶ್ವ ದಾಖಲೆ ಗೌರವ ದೊರಕಿದೆ.

ಹೈದರಾಬಾದ್ ನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಗಿನ್ನಿಸ್ ವಿಶ್ವ ದಾಖಲೆಯ ಪ್ರತಿನಿಧಿಗಳು ಚಿರಂಜೀವಿಗೆ ಅವರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದ್ದಾರೆ.

ಚಿರಂಜೀವಿ ಅವರು 1978ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಅವರ 46 ವರ್ಷಗಳ ಸಿನಿ ಪಯಣದಲ್ಲಿ 156 ಚಿತ್ರಗಳಲ್ಲಿ ಅಭಿನಯಿಸಿದ್ದು, 537 ಹಾಡುಗಳಲ್ಲಿ 24,000 ಡ್ಯಾನ್ಸ್ ಸ್ಟೆಪ್ಸ್ ಹಾಕಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಚಿರಂಜೀವಿ, ಈ ಕ್ಷಣ ಅವಿಸ್ಮರಣೀಯವಾಗಿದೆ. ನಾನು ಮಾಡಿದ ನೃತ್ಯಗಳಿಂದಾಗಿ ಗಿನ್ನಿಸ್ ವಿಶ್ವ ದಾಖಲೆಗೆ ಸೇರುತ್ತೇನೆಂದು ಎಂದಿಗೂ ಊಹಿಸಿರಲಿಲ್ಲ. ಇದು ನಿಜವಾಗಿಯೂ ನನ್ನನ್ನು ನಟನಾಗಿ ಮಾಡಿದೆ. ನೃತ್ಯವು ನನ್ನ ವೃತ್ತಿ ಜೀವನದುದ್ದಕ್ಕೂ ಉತ್ತಮ ಪ್ರಶಂಸೆ ತಂದುಕೊಟ್ಟಿದೆ. ನನ್ನನ್ನು ನಟನಾಗಿ ಮಾಡುವಲ್ಲಿ ನಿರ್ದೇಶಕರು, ನಿರ್ಮಾಪಕರು, ನೃತ್ಯ ಸಂಯೋಜಕರ ಕೊಡುಗೆ ಅಪಾರವಾಗಿದೆ. ಅವರಿಗೆ ಸದಾ ಚಿರಋಣಿಯಾಗಿರುತ್ತೇನೆ ಎಂದರು.

ಗಿನ್ನಿಸ್ ವಿಶ್ವ ದಾಖಲೆಗೆ ಸೇರ್ಪಡೆಯಾದ ಚಿರಂಜೀವಿ ಅವರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಹಾಗೂ ಚಿರಂಜೀವಿ ಸಹೋದರ ಪವನ್ ಕಲ್ಯಾಣ್, ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ‌,  ಸೇರಿದಂತೆ ಮತ್ತಿತರ ಸಿನಿ ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಕೋರಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

5 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

10 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

13 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago