Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ- ಬಸನಗೌಡ ಪಾಟೀಲ್ ಯತ್ನಾಳ್

ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕ ಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಗುಡುಗಿದ್ದಾರೆ.

ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಕಿಡಿಕಾರಿದ್ದಾರೆ.

ಪಕ್ಷದ ವಿರುದ್ದ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ  ಪಕ್ಷದ  ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರ ಉಚ್ಚಾಟನೆ ಮಾಡದೆ ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಟೊಂಕಕಟ್ಟಿ ಕೆಲಸ ಮಾಡಿದ ನನ್ನಂತವರಿಗೆ ಉಚ್ಚಾಟನೆ ಮಾಡುವುದು ಪಕ್ಷದ ದ್ವಂದ್ವ ನೀತಿಗಳಿಗೆ ಹಿಡಿದ ಕೈಗನ್ನಡಿ ಎಂದು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು ಯಾರ ‘ಅಡ್ಜಸ್ಟ್ಮೆಂಟ್ ರಾಜಕಾರಣದಿಂದ’ ಎಂದು ಪಕ್ಷದ ಪ್ರಮುಖರು ವಿಶ್ಲೇಷಿಸಲಿ ಎಂದು ತಿಳಿಸಿದ್ದಾರೆ.

ಬಿ.ಬಿ.ಶಿವಪ್ಪ, ಮಲ್ಲಿಕಾರ್ಜುನಪ್ಪ, ಡಾ ವಿ.ಎಸ.ಆಚಾರ್ಯರು ಸೇರಿದಂತೆ ಪಕ್ಷದ ಅನೇಕ ಧುರೀಣರು, ಸಾವಿರಾರು ಕಾರ್ಯಕರ್ತರು ಪಕ್ಷವನ್ನು ಸಂಘಟಿಸಿದ ಪರಿಣಾಮದಿಂದಲೇ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದ್ದು. ಬಿಡಿಗಾಸಿಲ್ಲದೇ, ಕಾರ್ಯಕರ್ತರ ಓಡಾಟ, ಉಪಹಾರಕ್ಕೂ ಹಣವಿಲ್ಲದಿರುವ ಕಾಲಘಟ್ಟದಲ್ಲಿ  ದಿವಂಗತ ಮಲ್ಲಿಕಾರ್ಜುನಪ್ಪನವರು ತಮ್ಮ ಸ್ವಂತ ಸಂಪನ್ಮೂಲದಿಂದ ಪಕ್ಷವನ್ನು ಮುನ್ನೆಡೆಸಿ ಕಾರ್ಯಕರ್ತರ ಮನೋಬಲವನ್ನು ಹೆಚ್ಚಿಸಿ ಸಂಘಟನೆಗೆ ಕಾರಣವಾದರು. ಮಾತು ಕಡಿಮೆಯಾದರೂ ತಮ್ಮ ಕೆಲಸದಿಂದ ಕರಾವಳಿಯಲ್ಲಿ ಪಕ್ಷವನ್ನು ಸಂಘಟಿಸಿದ್ದು ಪಕ್ಷ ಮರೆಯಲಾಗದ ಮಾಣಿಕ್ಯ  ಡಾ. ವಿ.ಎಸ್.ಆಚಾರ್ಯರು. ಆಯಕಟ್ಟಿನ ಸ್ಥಾನದಲ್ಲಿದ್ದರೂ ಆಚಾರ್ಯರ ಕುಟುಂಬದವರು ಯಾರೂ ಸಹ ರಾಜಕಾರಣಕ್ಕೆ ಬರಲಿಲ್ಲ ಎಂಬುದು ಹಲವರಿಗೆ ಗೊತ್ತಿಲ್ಲ ಎಂದಿದ್ದಾರೆ.

ಹಿಂದುತ್ವವಾದ ಬಗ್ಗೆ ರಾಜಿ ಮಾಡಿಕೊಳ್ಳದೆ, ಕುಟುಂಬ ರಾಜಕಾರಣದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದ ಈಶ್ವರಪ್ಪನವರನ್ನು ಹೊರಗಿಟ್ಟರು. ನಿಸ್ವಾರ್ಥ ಕಾರ್ಯಕರ್ತರು, ತನು-ಮನ-ಧನದಿಂದ ದುಡಿದ ಮುಖಂಡರಿಂದ ಪಕ್ಷದ ಸಂಘಟನೆಯಾಯಿತೇ ಹೊರತು ಸ್ವಯಂಘೋಷಿತ ‘ಪೂಜ್ಯ’ ರಿಂದಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಪ್ರ ಪ್ರಥಮ ಬಾರಿಗೆ ವಕ್ಫ್ ಹೋರಾಟಕ್ಕೆ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದು ನಾವೇ, ವಾಲ್ಮೀಕಿ ಹಗರಣ, ದಲಿತರಿಗೆ SCSP/TSP ಅನುದಾನದ  ದುರ್ಬಳಕೆಯನ್ನು ಖಂಡಿಸಿದ್ದು, ಹೋರಾಟ ರೂಪಿಸಿದ್ದು, ವಕ್ಫ್ ವಿರುದ್ಧ ನಾವು ಮಾಡಿದ್ದ ಮಾಹಿತಿ ಸಂಗ್ರಹಕ್ಕೆ ಜೆ.ಪಿ.ಸಿ ಅಧ್ಯಕ್ಷರಾದ ಶ್ರೀ ಜಗದಂಬಿಕಾ ಪಾಲ್ ಅವರು ಪ್ರಶಂಸಿಸಿದ್ದರು ಎಂದು ತಿಳಿಸಿದ್ದಾರೆ.

ಪ್ರತಿ ಬಾರಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆಯನ್ನು, ಕೃಷ್ಣ ಯೋಜನೆಯ ವಿಳಂಬದ ಬಗ್ಗೆ ಧ್ವನಿ ಎತ್ತಿದ್ದು ನಾವೇ, ಕರ್ನಾಟಕ ಲೋಕ ಸೇವಾ ಆಯೋಗದಲ್ಲಿರುವ ಭ್ರಷ್ಟರನ್ನು ಕಿತ್ತೊಗೆಯಲು ಸ್ಪರ್ಧಾರ್ಥಿಗಳ ಜೊತೆಗೆ ನಿಂತಿದ್ದು ನಾವೇ. ಬಾಣಂತಿಯರ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು ನಾನೇ.  ಪಕ್ಷದಲ್ಲಿ ಆಗಬೇಕಾದ ಕೆಲ ಬದಲಾವಣೆಗಳು, ಸುಧಾರಣೆಗಳು ಸೂಚಿಸಿದಕ್ಕೆ ನಮ್ಮ ನಿಲುವು ಕೆಲವರಿಗೆ ‘ಅಪಥ್ಯ’ ವಾಗಿದೆ ಎಂದಿದ್ದಾರೆ.

ಅಡ್ಜಸ್ಟ್ಮೆಂಟ್ ರಾಜಕಾರಣ ನಿಲ್ಲದಿದ್ದರೆ ಪಕ್ಷ ಮಕಾಡೆ ಮಲಗುವುದು ಖಚಿತ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಜವಾದ ಜನ ಪರ ಕಾಳಜಿ ಇರುವ ನಾಯಕರಿಗೆ ಪಕ್ಷ ಅವಕಾಶ ನೀಡಬೇಕು. ಕಾಟಾಚಾರಕ್ಕೆ ಸರ್ಕಾರದ ನೀತಿಗಳನ್ನು ಖಂಡಿಸಿ ಸಂಜೆ ವೇಳೆ ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗವಹಿಸುವ ನಾಯಕರ ಅವಶ್ಯ ಪಕ್ಷಕ್ಕಿಲ್ಲ ಎಂದು ಹೇಳಿದ್ದಾರೆ.

Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

2 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

7 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

10 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

1 day ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago