ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಲಾಗಿದೆ.
ಕರ್ನಾಟಕ ರಾಜ್ಯವು ದೇಶದಲ್ಲೇ ಮೊದಲು ಕೇಂದ್ರ ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಎರಡು ವರ್ಷದ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಅಳವಡಿಸಿಕೊಂಡಿತ್ತು. ಆದರೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಸದರಿ ಎನ್‌ಇಪಿ ರದ್ದು ಮಾಡಿ, ರಾಜ್ಯ ಶಿಕ್ಷಣ ನೀತಿ ರೂಪಿಸಲು ಪ್ರಸ್ತುತ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅದೇರೀತಿ ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…