ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಅತ್ಯಂತ ತೀವ್ರವಾಗಿ ಖಂಡಿಸುತ್ತೇನೆ. ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಎಂಬುವರು ಮೃತಪಟ್ಟಿದ್ದಾರೆ. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದು ಹೇಳಿದ್ದಾರೆ.
ಉಗ್ರರ ದಾಳಿ ಪೂರ್ವಯೋಜಿತ ಸಂಚು. ಅಮಾಯಕರ ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ, ಇಷ್ಟು ದೊಡ್ಡಮಟ್ಟದ ಕೃತ್ಯ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿತ್ತು, ಈಗಲೂ ಅದೇ ಮಾದರಿಯ ಘಟನೆ ಮರುಕಳಿಸಿದೆ ಎಂದರು.
ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪಹಲ್ಗಾಮ್‌ನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…
ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…
ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…