#PahalgamTerroristAttac ಪಹಲ್ಗಾಮ್‌ ಭಯೋತ್ಪಾದಕ ದಾಳಿ: ಮೃತರ ಕುಟುಂಬಕ್ಕೆ ಹತ್ತು ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಅತ್ಯಂತ ತೀವ್ರವಾಗಿ ಖಂಡಿಸುತ್ತೇನೆ. ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಎಂಬುವರು ಮೃತಪಟ್ಟಿದ್ದಾರೆ. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದು ಹೇಳಿದ್ದಾರೆ.

ಉಗ್ರರ ದಾಳಿ ಪೂರ್ವಯೋಜಿತ ಸಂಚು. ಅಮಾಯಕರ ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ, ಇಷ್ಟು ದೊಡ್ಡಮಟ್ಟದ ಕೃತ್ಯ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿತ್ತು, ಈಗಲೂ ಅದೇ ಮಾದರಿಯ ಘಟನೆ ಮರುಕಳಿಸಿದೆ ಎಂದರು.

ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪಹಲ್ಗಾಮ್‌ನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

Ramesh Babu

Journalist

Recent Posts

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

5 hours ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

5 hours ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

7 hours ago

ಎಫ್‌ಐಡಿ ಹೊಂದಿದ ರೈತರಿಗೆ ಮಾತ್ರ ಬರಪರಿಹಾರ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಸಂಕಷ್ಟಕ್ಕೊಳಗಾದ ರೈತರಿಗೆ ನೆರವು ಒದಗಿಸುವ ಉದ್ದೇಶದಿಂದ,…

8 hours ago

ಉರ್ದು ಹಬ್ಬವನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ನಿಖಿಲ್ ಕುಮಾರಸ್ವಾಮಿ

ದೊಡ್ಡಬಳ್ಳಾಪುರ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಲಿರುವ ‘ಉರ್ದು ಹಬ್ಬ’ ಆಚರಣೆಯನ್ನು ಕೇವಲ ರಾಜಕೀಯ ದೃಷ್ಟಿಕೋನದಿಂದ ನೋಡಬಾರದು ಎಂದು ಜೆಡಿಎಸ್ ಯುವ…

8 hours ago

ಜಿಲ್ಲೆಯಲ್ಲಿ ಪಾತಾಳ ಮುಟ್ಟಿದ ಅಂತರ್ಜಲ! ಕೊಳವೆಬಾವಿಗಳ ಅತಿಯಾದ ಬಳಕೆ, ಮಳೆ ಕೊರತೆ; 1,250 ಅಡಿಯಲ್ಲೂ ನೀರು ಸಿಗುವುದು ಅನುಮಾನ

ಬೆಂಗಳೂರು ಗ್ರಾಮಾಂತರ: ಯಾವುದೇ ನದಿ ಮೂಲವಿಲ್ಲದ ಬಯಲುಸೀಮೆ ಪ್ರದೇಶವಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲದ ಮೇಲಿನ ಅವಲಂಬನೆ ವರ್ಷದಿಂದ ವರ್ಷಕ್ಕೆ…

17 hours ago