2024ರ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಎರಡನೇ ಪದಕ ಲಭಿಸಿದೆ. ಶೂಟಿಂಗ್ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಭಾರತದ ಮನು ಭಾಕರ್ ಮತ್ತು ಸರಬ್ಜಿತ್ ಸಿಂಗ್ ಜೋಡಿ ಕಂಚಿನದ ಪದಕವನ್ನು ಪಡೆದಿದ್ದಾರೆ.
ಮಂಗಳವಾರ ನಡೆದಿದ್ದ ಕಂಚಿನ ಪದಕದ ಸ್ಪರ್ಧೆಯಲ್ಲಿ ದಕ್ಷಿಣ ಕೊರಿಯಾದ ಓಹ್ ಯೆ ಜಿನ್ ಮತ್ತು ಲೀ ವೊನ್ಹೋ ವಿರುದ್ಧ ಭಾರತದ ಮನು ಭಾಕರ್ ಹಾಗೂ ಸರಬ್ಜಿತ್ ಸಿಂಗ್ ಜೋಡಿ 16-10 ಅಂತರದಲ್ಲಿ ಗೆಲುವು ಪಡೆಯಿತು.
ಪದಕ ಪಡೆದ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.
ಒಲಿಂಪಿಕ್ಸ್‌ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಅವರಿಗೆ ಅಭಿನಂದನೆಗಳು. ಇಬ್ಬರೂ ಉತ್ತಮ ಕೌಶಲ್ಯ ಮತ್ತು ಟೀಮ್ ವರ್ಕ್ ತೋರಿದ್ದಾರೆ. ಭಾರತವು ನಂಬಲಾಗದಷ್ಟು ಸಂತೋಷವಾಗಿದೆ ಎಂದು ಹೇಳಿದ್ದಾರೆ.