paris olympics2024: ಭಾರತಕ್ಕೆ ಎರಡನೇ ಪದಕ: ಶೂಟಿಂಗ್‌ 10 ಮೀಟರ್‌ ಏರ್ ಪಿಸ್ತೂಲ್‌ ಮಿಶ್ರ ವಿಭಾಗದಲ್ಲಿ ಮನು ಭಾಕರ್‌ ಮತ್ತು ಸರಬ್ಜಿತ್‌ ಸಿಂಗ್‌ ಜೋಡಿಗೆ ಒಲಿದ ಕಂಚಿನ ಪದಕ

2024ರ ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತಕ್ಕೆ ಎರಡನೇ ಪದಕ ಲಭಿಸಿದೆ. ಶೂಟಿಂಗ್‌ 10 ಮೀಟರ್‌ ಏರ್ ಪಿಸ್ತೂಲ್‌ ಮಿಶ್ರ ವಿಭಾಗದಲ್ಲಿ ಭಾರತದ ಮನು ಭಾಕರ್‌ ಮತ್ತು ಸರಬ್ಜಿತ್‌ ಸಿಂಗ್‌ ಜೋಡಿ ಕಂಚಿನದ ಪದಕವನ್ನು ಪಡೆದಿದ್ದಾರೆ.

ಮಂಗಳವಾರ ನಡೆದಿದ್ದ ಕಂಚಿನ ಪದಕದ ಸ್ಪರ್ಧೆಯಲ್ಲಿ ದಕ್ಷಿಣ ಕೊರಿಯಾದ ಓಹ್ ಯೆ ಜಿನ್ ಮತ್ತು ಲೀ ವೊನ್ಹೋ ವಿರುದ್ಧ ಭಾರತದ ಮನು ಭಾಕರ್‌ ಹಾಗೂ ಸರಬ್ಜಿತ್ ಸಿಂಗ್‌ ಜೋಡಿ 16-10 ಅಂತರದಲ್ಲಿ ಗೆಲುವು ಪಡೆಯಿತು.

ಪದಕ ಪಡೆದ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಒಲಿಂಪಿಕ್ಸ್‌ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಮನು ಭಾಕರ್‌ ಮತ್ತು ಸರಬ್ಜೋತ್ ಸಿಂಗ್ ಅವರಿಗೆ ಅಭಿನಂದನೆಗಳು.  ಇಬ್ಬರೂ ಉತ್ತಮ ಕೌಶಲ್ಯ ಮತ್ತು ಟೀಮ್ ವರ್ಕ್ ತೋರಿದ್ದಾರೆ. ಭಾರತವು ನಂಬಲಾಗದಷ್ಟು ಸಂತೋಷವಾಗಿದೆ ಎಂದು ಹೇಳಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

56 minutes ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

12 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

17 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

20 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

22 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago