ದ್ವಿತೀಯ ಪಿಯುಸಿ ಫಲಿತಾಂಶವನ್ನು ನಾಳೆ(ಏಪ್ರಿಲ್ 10) ರಂದು ಬೆಳಿಗ್ಗೆ 10 ಗಂಟೆಗೆ ಪ್ರಕಟಿಸಲಾಗುತ್ತದೆ. ಫಲಿತಾಂಶವನ್ನು ಅಭ್ಯರ್ಥಿಗಳು ಬೆಳಿಗ್ಗೆ 11 ಗಂಟೆಯ ನಂತರ ಪರಿಶೀಲಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. https://karesults.nic.in ವೆಬ್ ಸೈಟ್ ನಲ್ಲಿ 11 ಗಂಟೆ ನಂತರ ಫಲಿತಾಂಶ ವೀಕ್ಷಿಸಬಹುದು ಎಂದು ತಿಳಿಸಿದೆ.
ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ 1 ಅನ್ನು ಮಾರ್ಚ್ 01 ರಿಂದ 22 ರವರೆಗೆ ನಡೆಸಲಾಗಿತ್ತು. ರಾಜ್ಯದಾದ್ಯಂತ ಸುಮಾರು 6.9 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆದಿದ್ದರು.