ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಘಟನೆಗೆ ಭದ್ರತಾ ಲೋಪದ ಆರೋಪ ಮೇರೆಗೆ ಅಂದಿನ ಬೆಂಗಳೂರು ಆಯುಕ್ತ ಬಿ.ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ) ವಿಕಾಸ್ ಕುಮಾರ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್, ಕಬ್ಬನ್ ಪಾರ್ಕ್ ಉಪ ವಿಭಾಗದ ಎಸಿಪಿ ಬಾಲಕೃಷ್ಣ ಹಾಗೂ ಕಬ್ಬನ್ ಪಾರ್ಕ್ ಠಾಣೆ ಇನ್ಸ್‌ಪೆಕ್ಟರ್ ಎ.ಕೆ.ಗಿರೀಶ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ರಾಜ್ಯ ಸರ್ಕಾರ ತಾನೇ ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕಾಲ್ತುಳಿತ ದುರಂತಕ್ಕೆ ಪೊಲಿಸರೇ ನಿರ್ಲಕ್ಷ್ಯ ಕಾರಣ ಎಂದಿದ್ದ ರಾಜ್ಯ ಸರ್ಕಾರ ಇದೀಗ ದಿಢೀರ್ ಅಮಾನತು ಆದೇಶ ಹಿಂಪಡೆದುಕೊಂಡಿರುವುದು ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್, ಡಿಸಿಪಿ ಶೇಖರ್ ಹೆಚ್.ಟಿ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ASI ಬಾಲಕೃಷ್ಣ ಹಾಗೂ ಇನ್ಸ್‌ಪೆಕ್ಟರ್ ಗಿರೀಶ್ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದ್ರೆ, ಇದೀಗ ಏಕಾಏಕಿ ರಾಜ್ಯ ಸರ್ಕಾರ ಯುಟರ್ನ್ ಹೊಡೆದಿದ್ದು, ಪೊಲಿಸ್ ಅಧಿಕಾರಿಗಳ ಅಮಾನತು ಆದೇಶವನ್ನು ವಾಪಸ್ ಪಡೆದುಕೊಂಡಿದೆ.
ಕಾಲ್ತುಳಿತ ಘಟನೆ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ನಂತರ ಆರ್‌ಸಿಬಿ, ಡಿಎನ್ಎ ಹಾಗೂ ಕೆಎಸ್ಸಿಎ ವಿರುದ್ಧ ಕ್ರಮಕ್ಕೆ ತೀರ್ಮಾನಿಸಲಾಯಿತು. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೂಡ ಕುನ್ಹಾ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು.
ವಿಕಾಸ್ ಕುಮಾರ್ ತಮ್ಮ ಅಮಾನತು ಪ್ರಶ್ನಿಸಿ ರಾಜ್ಯ ಸರ್ಕಾರದ ವಿರುದ್ಧ ಸಿಎಟಿ ಮೊರೆ ಹೋಗಿದ್ದರು. ಇದನ್ನ ವಿಚಾರಣೆ ನಡೆಸಿದ್ದ ಸಿಎಟಿ, ವಿಕಾಶ್ ಕುಮಾರ್ ಅಮಾನತು ಆದೇಶವನ್ನು ರದ್ದುಗೊಳಿಸಿತ್ತು.
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…