RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಘಟನೆಗೆ ಭದ್ರತಾ ಲೋಪದ ಆರೋಪ ಮೇರೆಗೆ ಅಂದಿನ ಬೆಂಗಳೂರು ಆಯುಕ್ತ ಬಿ.ದಯಾನಂದ್‌, ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ) ವಿಕಾಸ್ ಕುಮಾರ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್‌, ಕಬ್ಬನ್ ಪಾರ್ಕ್ ಉಪ ವಿಭಾಗದ ಎಸಿಪಿ ಬಾಲಕೃಷ್ಣ ಹಾಗೂ ಕಬ್ಬನ್ ಪಾರ್ಕ್ ಠಾಣೆ ಇನ್ಸ್‌ಪೆಕ್ಟರ್‌ ಎ.ಕೆ.ಗಿರೀಶ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ರಾಜ್ಯ ಸರ್ಕಾರ ತಾನೇ ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕಾಲ್ತುಳಿತ ದುರಂತಕ್ಕೆ ಪೊಲಿಸರೇ ನಿರ್ಲಕ್ಷ್ಯ ಕಾರಣ ಎಂದಿದ್ದ ರಾಜ್ಯ ಸರ್ಕಾರ ಇದೀಗ ದಿಢೀರ್ ಅಮಾನತು ಆದೇಶ ಹಿಂಪಡೆದುಕೊಂಡಿರುವುದು ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್‌, ಡಿಸಿಪಿ ಶೇಖರ್ ಹೆಚ್.ಟಿ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ASI ಬಾಲಕೃಷ್ಣ ಹಾಗೂ ಇನ್ಸ್​ಪೆಕ್ಟರ್​ ಗಿರೀಶ್​ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದ್ರೆ, ಇದೀಗ ಏಕಾಏಕಿ ರಾಜ್ಯ ಸರ್ಕಾರ ಯುಟರ್ನ್ ಹೊಡೆದಿದ್ದು, ಪೊಲಿಸ್ ಅಧಿಕಾರಿಗಳ ಅಮಾನತು ಆದೇಶವನ್ನು ವಾಪಸ್ ಪಡೆದುಕೊಂಡಿದೆ.

ಕಾಲ್ತುಳಿತ ಘಟನೆ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ನಂತರ ಆರ್​ಸಿಬಿ, ಡಿಎನ್​ಎ ಹಾಗೂ ಕೆಎಸ್​​​ಸಿಎ ವಿರುದ್ಧ ಕ್ರಮಕ್ಕೆ ತೀರ್ಮಾನಿಸಲಾಯಿತು. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೂಡ ಕುನ್ಹಾ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು.

ವಿಕಾಸ್ ಕುಮಾರ್ ತಮ್ಮ ಅಮಾನತು ಪ್ರಶ್ನಿಸಿ ರಾಜ್ಯ ಸರ್ಕಾರದ ವಿರುದ್ಧ ಸಿಎಟಿ ಮೊರೆ ಹೋಗಿದ್ದರು. ಇದನ್ನ ವಿಚಾರಣೆ ನಡೆಸಿದ್ದ ಸಿಎಟಿ, ವಿಕಾಶ್ ಕುಮಾರ್ ಅಮಾನತು ಆದೇಶವನ್ನು ರದ್ದುಗೊಳಿಸಿತ್ತು.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

9 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

14 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

16 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

19 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago