Revenue inspector: ಸಂಬಂಧಿಕರಿಗಾಗಿ ತೂಬಗೆರೆ ರೆವಿನ್ಯೂ ಇನ್ಸ್‌ಪೆಕ್ಟರ್ ಅಧಿಕಾರ ದುರುಪಯೋಗ ಆರೋಪ: ರೆವಿನ್ಯೂ ಇನ್ಸ್‌ಪೆಕ್ಟರ್ ಲಕ್ಷಮ್ಮರನ್ನ ತೂಬಗೆರೆ ಉಪ ತಹಶೀಲ್ದಾರ್ ಕಚೇರಿಯಿಂದ ಬಿಡುಗಡೆ ಮಾಡುವಂತೆ ರೈತರ ಒತ್ತಾಯ

ದೊಡ್ಡಬಳ್ಳಾಪುರ: ತೂಬಗೆರೆ ರೆವಿನ್ಯೂ ಇನ್ಸ್‌ಪೆಕ್ಟರ್ ಲಕ್ಷ್ಮಮ್ಮನವರು ಸಂಬಂಧಿಕರಿಗಾಗಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ, ಹಣ ಇಲ್ಲದೆ ರೈತರ ಕೆಲಸ ಮಾಡಿಕೊಡುತ್ತಿಲ್ಲವೆಂದು ಗ್ರಾಮಸ್ಥರು ಆರೋಪ ಮಾಡಿದ್ದು, ತೂಬಗೆರೆ ರೆವಿನ್ಯೂ ಇನ್ಸ್‌ಪೆಕ್ಟರ್ ಹುದ್ದೆಯಿಂದ ಲಕ್ಷ್ಮಮ್ಮರನ್ನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸ್ಥಳೀಯ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯ ರೆವಿನ್ಯೂ ಇನ್ಸ್‌ಪೆಕ್ಟರ್ (ರಾಜಸ್ವ ನಿರೀಕ್ಷಕರು) ಆಗಿ ಲಕ್ಷ್ಮಮ್ಮ.ಆರ್ ಕಳೆದ ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ, ಅವರ ನಾಲ್ಕು ವರ್ಷಗಳ ಅವಧಿ ಭ್ರಷ್ಟಾಚಾರದಿಂದ ಕೂಡಿದೆ ಎಂಬುದು ರೈತರ ಆರೋಪವಾಗಿದೆ. ಅಕ್ರಮ ಖಾತೆಗಳನ್ನ ಮಾಡಿರುವುದು, ಸರ್ಕಾರಿ ಸವಲತ್ತುಗಳಾದ ಪಿಂಚಣಿ ಮಾಡಿಕೊಡಲು ಸಹ ಬಡವರಿಂದ ಹಣ ಕೇಳುತ್ತಾರೆ, ಅಕ್ರಮ ಸಕ್ರಮಕ್ಕಾಗಿ ಫಾರಂ ನಂಬರ್ 53 ಅರ್ಜಿ ಹಾಕಿದ ರೈತರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ, ಭೂಮಿ ಇರುವರಿಗೇ ಗೋಮಾಳ ಜಾಗವನ್ನು ಮಂಜೂರು ಮಾಡಿದ್ದಾರೆಂಬುದು ರೈತರ ಆರೋಪವಾಗಿದೆ.

ಲಕ್ಷಮ್ಮರವರದ್ದು ತೂಬಗೆರೆಯ ಗಂಡರಾಜಪುರ ಗ್ರಾಮದವರಾಗಿದ್ದು, ತೂಬಗೆರೆ ಹೋಬಳಿಯಲ್ಲಿ ಅವರ ಸಂಬಂಧಿಕರು ಇದ್ದಾರೆ, ದಂಡುದಾಸನ ಕೋಡಿಗೆಹಳ್ಳಿಯ ಕೃಷ್ಣಪ್ಪನವರು ಕಳೆದ 50 ವರ್ಷಗಳಿಂದ ಜಮೀನು ಸಾಗುವಳಿ ಮಾಡುತ್ತಿದ್ದಾರೆ, ಜಮೀನು ಮಂಜೂರು ಮಾಡುವಂತೆ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು, ಆದರೆ ಇದೇ ಗ್ರಾಮದಲ್ಲಿ ಲಕ್ಷ್ಮಮ್ಮರವರ ಅಕ್ಕ ವಾಸವಾಗಿದ್ದಾರೆ, ಅವರ ಅಕ್ಕನ ಗಂಡನಾದ ನಾರಾಯಣಸ್ವಾಮಿ ಒಂದು ತಿಂಗಳ ಹಿಂದೆಯಷ್ಟೇ ಅರ್ಜಿ ಹಾಕಿದ್ದು, ಅಕ್ರಮ ದಾಖಲೆ ಸೃಷ್ಟಿಸಿ ಒಂದು ತಿಂಗಳಲ್ಲೇ ಜಮೀನು ಮಂಜೂರು ಮಾಡುವ ಮೂಲಕ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆಂದು ಆರೋಪ ಮಾಡಿದ್ದಾರೆ.

ಆಡಳಿತಾತ್ಮಕ ಹಿತದೃಷ್ಟಿಯಿಂದ ಲಕ್ಷ್ಮಮ್ಮರನ್ನ ತೂಬಗೆರೆ ರೆವಿನ್ಯೂ ಇನ್ಸ್‌ಪೆಕ್ಟರ್ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ, ಸರ್ಕಾರದ ಕ್ರಮದಿಂದ ಸ್ಥಳೀಯ ರೈತರು ಸಂತಸಗೊಂಡಿದ್ದರು, ಆದರೆ ಲಕ್ಷ್ಮಮ್ಮ ಮತ್ತೆ ಇದೇ ಹುದ್ದೆಗೆ ಬರಲು ಕೋರ್ಟ್ ಮೂಲಕ ತಡೆ ತಂದಿದ್ದಾರೆ, ಲಕ್ಷ್ಮಮ್ಮ ಮತ್ತೆ ತೂಬಗೆರೆಗೆ ಬರುವುದು ಬೇಡ ಎನ್ನುವುದು ಸ್ಥಳೀಯ ರೈತರ ಬೇಡಿಕೆ, ಲಕ್ಷ್ಮಮ್ಮರನ್ನ ತೂಬಗೆರೆ ಕಚೇರಿಯಿಂದ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಕೊಟ್ಟಿದ್ದಾರೆ, ಇದರ ಜೊತೆಗೆ ಲಕ್ಷ್ಮಮ್ಮರವರು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳನ್ನ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ರೈತರು.

Ramesh Babu

Journalist

Recent Posts

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

1 hour ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

14 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

14 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

19 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

21 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

24 hours ago