SC-ST ಹೆಸರಲ್ಲಿ ಅನ್ಯ ಸಮುದಾಯದವರಿಗೆ ನಕಲಿ ಜಾತಿ ಪ್ರಮಾಣ ಪತ್ರ: ಇದರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

ಸಮಾವೇಶ, ಜಾತ್ರಾ ಮಹೋತ್ಸವ, ಹಬ್ಬ-ಹರಿದಿನಗಳನ್ನು ಆಚರಣೆ ಮಾಡುವುದು ನಮ್ಮಲ್ಲಿರುವ ಒಗ್ಗಟ್ಟನ್ನು ಪ್ರದರ್ಶಿಸಲು. ರಾಜ್ಯದಲ್ಲಿ ವಾಲ್ಮೀಕಿ ಸಮಾಜದ ಒಗ್ಗಟ್ಟು ಬಲಿಷ್ಠವಾಗಿದೆ. ನಮ್ಮ ಬಲಿಷ್ಠತೆಯನ್ನು ಪ್ರದರ್ಶನ ಮಾಡಲು ವಾಲ್ಮೀಕಿ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಫೆ.8 ಮತ್ತು 9ರಂದು ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ತಿಳಿಸಿದರು.

ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾ ಸ್ವಾಮೀಜಿಯವರು ದೊಡ್ಡಬಳ್ಳಾಪುರದಲ್ಲಿ ತಾಲ್ಲೂಕು ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ 2024 ಪೂರ್ವಭಾವಿ ಸಭೆ ಹಾಗೂ ತಾಲ್ಲೂಕು ಮಟ್ಟದ ಜನಜಾಗೃತಿ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ ನೀಡಿ ಮಾತನಾಡಿದ ಅವರು, ಈಗಾಗಲೇ ಐದು ಜಾತ್ರೆಗಳು ಯಶಸ್ವಿಯಾಗಿ ನಡೆದಿವೆ. ಇದೀಗ ಆರನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಸಮುದಾಯದ ಮುಂದಿರುವ ಹತ್ತು ಹಲವು ಬೇಡಿಕೆಗಳನ್ನು ಸರ್ಕಾರಕ್ಕೆ ಆಗ್ರಹ ಮಾಡುವ ಮೂಲಕ ಸಮುದಾಯದ ಆಶೋತ್ತರಗಳನ್ನು ಈಡೇರಿಸುವ ಬೃಹತ್ ಜನಜಾಗೃತಿಗಾಗಿ ಜಾತ್ರಾ ಮಹೋತ್ಸವವೇ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ. ಜಾತ್ರಾ ಮಹೋತ್ಸವದಲ್ಲಿ ವಿಚಾರ ಗೋಷ್ಠಿಗಳು, ನಾಡಿನ ಹಾಗೂ ಸಮುದಾಯದ ಇತಿಹಾಸ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಬೃಹತ್ ಜನಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ‌ ಹೆಸರಲ್ಲಿ ಅನ್ಯ ಸಮುದಾಯದವರು ನಕಲಿ ಜಾತಿ ಪ್ರಮಾಣ ಪತ್ರವನ್ನ ಪಡೆದುಕೊಂಡು ನಿಜವಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ‌ದವರ ಸವಲತ್ತುಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಈ ಕುರಿತು ಸರ್ಕಾರ ಗಮನಕ್ಕೆ ತರಲಾಗಿದ್ದು, ಈಗಾಗಲೇ ನಕಲಿ ಜಾತಿ ಪ್ರಮಾಣ ಪತ್ರ ನೀಡಿದಂತಹ 175 ತಹಶಿಲ್ದಾರ್ ಗಳ ಮೇಲೆ ಸುಮೋಟೋ ಕೇಸ್ ದಾಖಲಿಸಿ ಎಫ್ ಐಆರ್ ಮಾಡಲಾಗಿದೆ. ಪರಿಶಿಷ್ಟರ ಹೆಸರಲ್ಲಿ ಜಾತಿ ಪ್ರಮಾಣ ಪತ್ರಗಳನ್ನು ಸವರ್ಣಿಯರು ಪಡೆದು ಶೋಷಿತ ಸಮುದಾಯವನ್ನು ಅವಕಾಶಗಳಿಂದ ವಂಚಿಸುವುದು ಸರಿಯಲ್ಲ. ಇದರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಸಿದರು.

ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯುವ ರಾಮ ಪ್ರತಿಷ್ಠಾಪನ ಕಾರ್ಯಕ್ರಮ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ, ಜನವರಿ 22ರಂದು ಹಲವು ಮಠಗಳ ಶ್ರೀಗಳ ಸಂಗಡ ತಾವು ಆಯೋಧ್ಯೆಗೆ ತೆರಳಿ ರಾಮ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ  ಭಾಗವಹಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ, ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿಯ ರಾಜ್ಯಾಧ್ಯಕ್ಷ ಮುನಿರಾಜು(ಚಿಕ್ಕಪ್ಪಿ) ಅವರನ್ನು ತಾಲ್ಲೂಕು ಜಾತ್ರಾ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ವಾಲ್ಮೀಕಿ ಸಮಾಜದ ಮುಖಂಡ ಮುನಿರಾಜು (ಚಿಕ್ಕಪ್ಪಿ)  ಮಾತನಾಡಿ, ನಮ್ಮ ಸಮಾಜದ ಪ್ರಮುಖರು ಪೂಜ್ಯರು ಆದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಜಾತ್ರಾ ಮಹೋತ್ಸವದ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಜವಾಬ್ದಾರಿಯನ್ನು ವಹಿಸಿದ್ದಾರೆ. ಅವರ ವಿಶ್ವಾಸಕ್ಕೆ ಬದ್ಧನಾಗಿ ನಮ್ಮ ಸಮುದಾಯದ ಮುಖಂಡರು ಹಾಗೂ ಸಂಗಡಿಗರ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗೊಳಿಸಲು ಶ್ರಮಿಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಂಘದ ತಾಲೂಕು ಅಧ್ಯಕ್ಷ ಪ್ರೇಮ್ ಕುಮಾರ್, ಕೇಬಲ್ ರಾಮಚಂದ್ರ, ಹಿರಿಯ ಹೋರಾಟಗಾರ ಸಂಜೀವ್ ನಾಯಕ, ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕರ ಯುವಪಡೆ ರಾಜ್ಯಾಧ್ಯಕ್ಷ ಸುಬ್ರಮಣಿ, ಕುಮಾರ್, ರಾಜಣ್ಣ, ಅಂಬರೀಶ್, ರಘು, ನವೀನ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿರಿದರು.

Ramesh Babu

Journalist

Recent Posts

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

3 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

5 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

5 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

12 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

23 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 day ago