‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆ ವಿಪಕ್ಷ ಉಪ ನಾಯಕರಾದ ಅರವಿಂದ ಬೆಲ್ಲದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇತರ ಎನ್‌ಡಿಎ ಮುಖಂಡರೊಂದಿಗೆ ಭೇಟಿಯಾಗಿ, ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದ ಗಂಭೀರ ಅಕ್ರಮಗಳ ಕುರಿತು ವಿಡಿಯೋ ಮತ್ತು ಇತರ ಸಾಕ್ಷ್ಯಾಧಾರಗಳೊಂದಿಗೆ ಅಧಿಕೃತ ದೂರು ಸಲ್ಲಿಸಲಾಯಿತು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಬೇಕಿದ್ದ ಬೂತ್ ಮಟ್ಟದ ಅಧಿಕಾರಿಗಳು (BLOಗಳು) ಕೆಲವು ಧಾರ್ಮಿಕ ಸ್ಥಳಗಳಲ್ಲಿ ಮತದಾರರ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸುತ್ತಿರುವ ದೃಶ್ಯಗಳು ಬೆಳಕಿಗೆ ಬಂದಿವೆ. ಈ ಕುರಿತು ಸಾರ್ವಜನಿಕರು ಪ್ರಶ್ನಿಸಿದಾಗ ಕೆಲ ಅಧಿಕಾರಿಗಳಿಂದ ಅಸಮಂಜಸ ವರ್ತನೆ ಹಾಗೂ ಬೆದರಿಕೆ ಆರೋಪಗಳೂ ಕೇಳಿಬಂದಿವೆ ಎಂದರು.

ಅದರ ಜೊತೆಗೆ, ಮರಣ ಹೊಂದಿರುವವರು, ವಲಸೆ ಹೋಗಿರುವವರು ಹಾಗೂ ಅಸ್ತಿತ್ವದಲ್ಲಿಲ್ಲದವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕದಂತೆ ಮೌಖಿಕ ಸೂಚನೆಗಳನ್ನು ನೀಡಲಾಗಿದೆ ಎಂಬ ಆರೋಪಗಳೂ ವ್ಯಕ್ತವಾಗಿವೆ. ಇಂತಹ ಬೆಳವಣಿಗೆಗಳು ಮತದಾರರ ಪಟ್ಟಿಯ ವಿಶ್ವಾಸಾರ್ಹತೆ ಮತ್ತು ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸುತ್ತವೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ, ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಅನುಮಾನಾಸ್ಪದವಾಗಿ ಭರ್ತಿ ಮಾಡಲಾದ ಎಲ್ಲ ಅರ್ಜಿಗಳನ್ನು ಸ್ವತಂತ್ರ ಸಂಸ್ಥೆಯಿಂದ ಸಮಗ್ರವಾಗಿ ಮರುಪರಿಶೀಲಿಸಬೇಕು ಎಂದು ಭಾರತೀಯ ಚುನಾವಣಾ ಆಯೋಗವನ್ನು ನಾವು ಒತ್ತಾಯಿಸಿದ್ದೇವೆ ಎಂದರು.

ಪ್ರಜಾಪ್ರಭುತ್ವದ ಅಡಿಪಾಯವಾದ ಚುನಾವಣಾ ವ್ಯವಸ್ಥೆಯ ಪಾವಿತ್ರ್ಯವನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ. ಕರ್ನಾಟಕದ ಪ್ರತಿಯೊಬ್ಬ ಮತದಾರನಿಗೂ ಪಾರದರ್ಶಕ, ನಿಖರ ಹಾಗೂ ವಂಚನೆರಹಿತ ಮತದಾರರ ಪಟ್ಟಿಯನ್ನು ಖಚಿತಪಡಿಸಬೇಕು ಎಂಬುದು ನಮ್ಮ ಸ್ಪಷ್ಟ ಆಗ್ರಹ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

9 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

22 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

23 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago