ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡದ ಅಂಕಿತಾಗೆ ರಾಜ್ಯದ ಹಳ್ಳಿ ರೈತರ ಪರವಾಗಿ ಹಳ್ಳಿರೈತ ಅಂಬರೀಷ್ ಅವರು ಸನ್ಮಾನ ಮಾಡಿ ಅಭಿನಂದಿಸಿದರು.
ಸರ್ಕಾರಿ ಹಾಸ್ಟೆಲ್ ನಲ್ಲಿ ಓದಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಅಂಕಿತಾಗೆ ಮುಂದಿನ ಭವಿಷ್ಯ ಉತ್ತಮವಾಗಿರಲಿ ಎಂದು ಶುಭಹಾರೈಕೆ ಮಾಡಿದರು.
ಅದೇರೀತಿ, ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರನ್ನು ಭೇಟಿ ಮಾಡಿ ಸನ್ಮಾನಿಸಿ ಗೌರವಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ನಂತರ ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ 5 ಲಕ್ಷ ರೂ. ಚೆಕ್ ವಿತರಣೆ ಮಾಡಿದ್ದರು.