2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ.66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.
ಈ ವರ್ಷ ಶೇ.91.12ರಷ್ಟು ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಶೇ.89.96ರಷ್ಟು ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ದ್ವಿತೀಯ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ಮೊದಲ ನಾಲ್ಕು ಸ್ಥಾನ ಹಾಗೂ ಶೇ. 42.43 ಫಲಿತಾಂಶದೊಂದಿಗೆ ಕಲಬುರಗಿ ಕೊನೆಯ ಸ್ಥಾನದಲ್ಲಿದೆ.
ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಸುಮಾರು 8.96 ಲಕ್ಷ ವಿದ್ಯಾರ್ಥಿಗಳು, 4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.