T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಎದುರಾಳಿ ತಂಡಕ್ಕೆ 256 ರನ್ ಗಳ ಅತ್ಯಧಿಕ ರನ್ ಟಾರ್ಗೆಟ್ ನೀಡಿತ್ತು. ಭಾರತದ ಪರ ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪರಿಣಾಮ ಭಾರತ ಬೃಹತ್ ಮೊತ್ತ ಗಳಿಸಲು ಸಾಧ್ಯವಾಯಿತು.

ಬೃಹತ್ ರನ್ ಚೇಸಿಂಗ್ ಗೆ ಇಳಿದ ನ್ಯೂಜಿಲ್ಯಾಂಡ್ ತಂಡ 100 ರನ್ ಗಳನ್ನು ಗಳಿಸುವ ಮುನ್ನವೇ ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿತು.

ಅಂತಿಮವಾಗಿ ಭಾರತದ ಎದುರು ನ್ಯೂಜಿಲ್ಯಾಂಡ್ ಇನ್ನೂ ಒಂದು ಓವರ್ ಬಾಕಿ ಇರುವಾಗಲೇ 159 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು.

ನ್ಯೂಜಿಲೆಂಡ್ ತಂಡವನ್ನು ಮಣಿಸಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತ ತಂಡ ಸುಮಾರು 20.4 ಕೋಟಿ ರೂಪಾಯಿಯಷ್ಟು ಬೃಹತ್ ಮೊತ್ತವನ್ನು ಬಹುಮಾನವಾಗಿ ಪಡೆದಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಈ ಬಾರಿಯ ಟಿ20 ವಿಶ್ವಕಪ್‌ಗಾಗಿ ದಾಖಲೆ ಮಟ್ಟದ ಒಟ್ಟು ಬಹುಮಾನದ ಮೊತ್ತವನ್ನು ಘೋಷಿಸಿದೆ.

ಈ ಬಾರಿಯ ಟೂರ್ನಿಗಾಗಿ ಐಸಿಸಿ ಒಟ್ಟು 11.25 ಮಿಲಿಯನ್ ಅಮೆರಿಕನ್ ಡಾಲರ್ (ಅಂದಾಜು 93.5 ಕೋಟಿ ರೂಪಾಯಿ) ಮೊತ್ತವನ್ನು ಬಹುಮಾನಕ್ಕಾಗಿ ಮೀಸಲಿಟ್ಟಿತ್ತು. ಕ್ರಿಕೆಟ್ ಇತಿಹಾಸದಲ್ಲೇ ಟಿ20 ವಿಶ್ವಕಪ್‌ಗೆ ನೀಡಲಾದ ಅತಿ ದೊಡ್ಡ ಬಹುಮಾನದ ಮೊತ್ತ ಇದಾಗಿದೆ. ಪ್ರತಿಯೊಂದು ಪಂದ್ಯದ ಗೆಲುವಿಗೂ ಸುಮಾರು 25 ಲಕ್ಷ ರೂಪಾಯಿಗಳ ಬೋನಸ್ ನೀಡಲಾಗಿದ್ದು, ಇದು ಈ ಟೂರ್ನಿಯಲ್ಲಿ ಅಚ್ಚರಿಯ ಫಲಿತಾಂಶ ನೀಡಿದ ಸಣ್ಣ ತಂಡಗಳಿಗೂ ಆರ್ಥಿಕವಾಗಿ ಸಹಾಯವಾಗಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

3 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

5 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

7 hours ago

ಕೆ.ಎಚ್.ಎಂ. ಯೂತ್ ಕಾಂಗ್ರೆಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ನರಸಿಂಹ ಮೂರ್ತಿ ಹೆಚ್…

7 hours ago

ಮಾ.31 ರಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋ

ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ಮಾ.31 ರಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು ಹಮ್ಮಿಕೊಳ್ಳಲಾಗಿದೆ ಎಂದು…

10 hours ago

ವಾರ್ಷಿಕ ಭವಿಷ್ಯ……ಯಾವುದೇ ರಾಶಿಯವರಾಗಿದ್ದರೂ, ಮನುಷ್ಯರಾಗಿರುವವರಿಗೆ ಮಾತ್ರ……..

ನಿಮ್ಮ ವಾರ್ಷಿಕ ಭವಿಷ್ಯ...... ಯಾವುದೇ ರಾಶಿಯವರಾಗಿದ್ದರೂ, ಮನುಷ್ಯರಾಗಿರುವವರಿಗೆ ಮಾತ್ರ........ ಇಂದು ಮಾರ್ಚ್ 29, 2026/2027 ರವರೆಗೆ ಈ ಯುಗಾದಿಯಿಂದ ಪ್ರಾರಂಭವಾಗುವ…

11 hours ago