U19 World Cup: ಸ್ಟಾರ್ ಬ್ಯಾಟರ್ ವೈಭವ್ ಸೂರ್ಯವಂಶಿ 175 ರನ್: 6ನೇ ಬಾರಿಗೆ U19 World Cup ಗೆದ್ದು ಬೀಗಿದ ಭಾರತ

U19 World Cup: ಐಸಿಸಿ ಅಂಡರ್-19 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಭಾರತ ದಾಖಲೆಯ 6ನೇ ಬಾರಿಗೆ U19 World Cup ಗೆದ್ದು ಬೀಗಿದೆ.

ಹರಾರೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು. ಭಾರತದ ಸ್ಟಾರ್ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ 175 ರನ್ ಗಳ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 411 ರನ್ ಪೇರಿಸಿತ್ತು.

ಭಾರತ ನೀಡಿದ 412 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ಯುವಪಡೆ 311 ರನ್ ಗಳಿಗೆ ಆಲೌಟ್ ಆಗುವ ಮೂಲಕ 100 ರನ್ ಗಳಿಂದ ಸೋಲು ಕಂಡಿದೆ.

ಭಾರತ ಪರ ನಾಯಕ ಆಯುಷ್ ಮ್ಹಾತ್ರೆ 53 ರನ್ ಗಳಿಸಿದರೇ, ಅಭಿಗ್ಯಾನ್ ಕುಂಡು 40, ಕನಿಷ್ಕ್ ಚೌಹಾಣ್ ಅಜೇಯ 37 ಮತ್ತು ವೇದಾಂತ್ ತ್ರಿವೇದಿ 32 ರನ್ ಗಳಿಸಿದರು. ಜೇಮ್ಸ್ ಮಿಂಟೊ ಇಂಗ್ಲೆಂಡ್ ಪರ ಮೂರು ವಿಕೆಟ್ ಪಡೆದರು.

ಇಂಗ್ಲೆಂಡ್ ಪರ ಕ್ಯಾಲೆಬ್ ಫಾಲ್ಕನರ್ ಸ್ಫೋಟಕ ಬ್ಯಾಟಿಂಗ್ ಮಾಡಿ 115 ರನ್ ಕಲೆಹಾಕಿದರು. ಬೆನ್ ಡಾಕಿನ್ಸ್ ಉತ್ತಮ ಬ್ಯಾಟಿಂಗ್ ಮಾಡಿ 66 ರನ್ ಕಲೆ ಹಾಕಿದರು. ಬೆನ್ ಮೇಯಸ್ 45, ಥಾಮಸ್ ರೆವ್ 31 ರನ್ ಕಲೆ ಹಾಕಿದರು. ಭಾರತದ ಪರ ಅಂಬರೀಶ್ 3, ದೀಪೇಶ್ ದೇವೇಂದ್ರನ್, ಕನಿಷ್ಕ್ ಚೌಹಾನ್ ತಲಾ 2 ವಿಕೆಟ್, ಕಿಲಾನ್ ಪಟೇಲ್ ಮತ್ತು ಆಯೂಶ್ ಮಾತ್ರೆ ತಲಾ 1 ವಿಕೆಟ್ ಪಡೆದಿದ್ದಾರೆ.

Ramesh Babu

Journalist

Recent Posts

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

56 minutes ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

11 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

15 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

23 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

1 day ago