ಅತಿವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ನೇರವಾಗಿ ರಸ್ತೆ ಬದಿ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ.
ಕಂಟನಕುಂಟೆ ಗ್ರಾಮದ ಪುನೀತ್(16)ಮೃತ ಬಾಲಕ. ಇಂದು ಸಂಜೆ ಅಜ್ಜಿಯ ಊರಾದ ತಿರುಮನಗೊಂಡನಹಳ್ಳಿ ಗ್ರಾಮಕ್ಕೆ ಬರುವ ವೇಳೆ ಅವಘಡ ಸಂಭವಿಸಿದೆ.
ಡಿಕ್ಕಿ ರಭಸಕ್ಕೆ ಬೈಕ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.. ಹಿಂಬದಿ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ಯಿಯಲ್ಲಿ ಘಟನೆ ಸಂಭವಿಸಿದೆ.