UPSC ಪರೀಕ್ಷೆಗೆ ಹೆದರಿ ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ 

ಯುಪಿಎಸ್ ಸಿ ಪರೀಕ್ಷೆಗೆ ಹೆದರಿ ಡೆತ್ ನೋಟ್ ಬರೆದಿಟ್ಟು ಯುವಕ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ನೆಲ್ಲುಕುಂಟೆ ಸಮೀಪದ ಮಜರಾಹೊಸಹಳ್ಳಿ‌ ಗ್ರಾಮದಲ್ಲಿ ನಡೆದಿದೆ.

ಜಗದೀಶ್ (28) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ.

ಮಾ12ರಂದು ಪೋಷಕರು ಊರಿಗೆ ಹೋದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ನಿನ್ನೆ ರಾತ್ರಿ ಜಗದೀಶ್ ತಾಯಿ ಮರಳಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಡೆತ್ ನೋಟ್ ನಲ್ಲಿ ಪರೀಕ್ಷೆ ಎದುರಿಸಲು ಸಾಧ್ಯವಾಗುತ್ತಿಲ್ಲ  ಆ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತದ್ದೇನೆ ಎಂದು  ಉಲ್ಲೇಖವಾಗಿದೆ.

ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *