
ಪ್ರೇಮಿಗಳ ವಿಶೇಷ ದಿನವಾದ ವ್ಯಾಲೆಂಟೈನ್ಸ್ ಡೇ ಗೆ ಸದ್ಯ ದಿನಗಣನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಹೋಬಳಿಯ ಪ್ರಸಿದ್ಧ ಪ್ರವಾಸಿ ತಾಣವಾದ ನಂದಿ ಗಿರಿಧಾಮಕ್ಕೆ ಫೆಬ್ರವರಿ 14 ರಂದು ಪ್ರೇಮಿಗಳ ದಿನದ ಆಚರಣೆ ಪ್ರಯುಕ್ತ ಸಾವಿರಾರು ಸಂಖ್ಯೆಯಲ್ಲಿ ಪ್ರೇಮಿಗಳು, ಪ್ರವಾಸಿಗರು ಆಗಮಿಸುವ ಸಾಧ್ಯತೆಗಳಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ನಂದಿ ಗಿರಿಧಾಮಕ್ಕೆ ಫೆಬ್ರವರಿ14 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶವನ್ನು ನಿಷೇಧಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.