ಸುಮಾರು 20 ವರ್ಷಗಳಿಗೂ ಸುದೀರ್ಘ WWE ರೆಸ್ಲಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಕ್ರೀಡಾ ಪ್ರೇಮಿಗಳನ್ನು ರಂಜಿಸಿದ್ದ ಜಾನ್ ಸೀನಾ ತಮ್ಮ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.
WWE ಸೂಪರ್‌ಸ್ಟಾರ್, 17 ಬಾರಿ ಚಾಂಪಿಯನ್ ಆಗಿರುವ ಜಾನ್ ಸೀನಾ ತಮ್ಮ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಗುಂಥರ್ ವಿರುದ್ಧ ಸೋಲಿನೊಂದಿಗೆ WWE ಗೆ ಜಾನ್ ಸೀನಾ ವಿದಾಯ ಹೇಳಿದ್ದಾರೆ.
ಸೀನಾ ಅವರ 23 ವರ್ಷಗಳ ಅದ್ಭುತ ವೃತ್ತಿಜೀವನಕ್ಕೆ ಸೂಕ್ತವಾದ ಬೀಳ್ಕೊಡುಗೆ ಸಿಗಬೇಕು ಎಂದು ಅಭಿಮಾನಿಗಳು ಬಯಸಿದ್ದರು. ಆದರೆ, ವಿದಾಯ ಪಂದ್ಯವನ್ನು ಸೋತಿದ್ದರಿಂದ ವಿಶ್ವದಾದ್ಯಂತ ಜಾನ್ ಸೀನಾ ಫ್ಯಾನ್ಸ್ ನಿರಾಶೆಗೊಂಡಿದ್ದಾರೆ.
2002ರ ಜೂನ್ 27 ರಂದು ಸ್ಮ್ಯಾಕ್‌ಡೌನ್‌ನಲ್ಲಿ ಜಾನ್ ಸೀನಾ WWE ಗೆ ಪಾದಾರ್ಪಣೆ ಮಾಡಿದರು. ಮುಂದಿನ ಎರಡು ದಶಕಗಳಲ್ಲಿ, ಸೀನಾ ಪ್ರಚಾರದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರಾದರು. 17 ಬಾರಿ WWE ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಕಂಪನಿಯ ಪ್ರಶಸ್ತಿ ಇತಿಹಾಸದಲ್ಲಿ ಅವರು ಅಗ್ರಸ್ಥಾನದಲ್ಲಿರುವ ದಾಖಲೆಯನ್ನು ಹೊಂದಿದ್ದಾರೆ. ಅವರು ಆರು ಬಾರಿ ರೆಸಲ್‌ಮೇನಿಯಾದಲ್ಲಿ ಪ್ರಮುಖ ಸ್ಥಾನ ಪಡೆದಿದ್ದಾರೆ. ಇಂಟರ್‌ಕಾಂಟಿನೆಂಟಲ್ ಪ್ರಶಸ್ತಿ ಸೇರಿದಂತೆ WWE ನ ಪ್ರಮುಖ ಚಾಂಪಿಯನ್‌ಶಿಪ್‌ಗಳನ್ನು ಗೆಲ್ಲುವ ಮೂಲಕ ಗ್ರ್ಯಾಂಡ್ ಸ್ಲಾಮ್ ಅನ್ನು ಪೂರ್ಣಗೊಳಿಸಿದ್ದಾರೆ.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…